ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ದಾಖಲು

ನವದೆಹಲಿ: ಸಾಮಾನ್ಯ ತಪಾಸಣೆಗಾಗಿ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಬುಧವಾರ ಇಲ್ಲಿನ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅವರ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಸೋನಿಯಾ ಅವರು ಆಸ್ಪತ್ರೆಗೆ ಬಂದಿದ್ದಾರೆ ಎಂದು ಅವರು ಹೇಳಿದರು.

ಮೂಲಗಳ ಪ್ರಕಾರ, ಸೋನಿಯಾ ಗಾಂಧಿ ಅವರು ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದಾರೆ.

ಸೋನಿಯಾ ಗಾಂಧಿ ಅವರು ಮಂಗಳವಾರದಿಂದ ಅಸ್ವಸ್ಥರಾಗಿದ್ದಾರೆ. ಅದಕ್ಕಾಗಿಯೇ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಮಂಗಳವಾರ ಸಂಜೆ ಉತ್ತರ ಪ್ರದೇಶಕ್ಕೆ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆಯಲ್ಲಿ ಏಳು ಕಿಲೋಮೀಟರ್ ನಡೆದು ದೆಹಲಿಗೆ ಮರಳಿದರು.

ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಯು ಉತ್ತರ ಪ್ರದೇಶದ ಬಾಗ್‌ಪತ್‌ನ ಮಾವಿಕಲನ್‌ನಲ್ಲಿ ರಾತ್ರಿ ನಿಂತ ನಂತರ ಬುಧವಾರ ಬೆಳಿಗ್ಗೆ 6 ಗಂಟೆಗೆ ತನ್ನ ಪ್ರಯಾಣವನ್ನು ಪುನರಾರಂಭಿಸಿತು. ಆದರೆ, ಯಾತ್ರೆಯ ಪುನರಾರಂಭದಲ್ಲಿ ಪ್ರಿಯಾಂಕಾ ಗಾಂಧಿ ಅವರು ರಾಹುಲ್ ಜೊತೆಗೆ ಇರಲಿಲ್ಲ.

ಇದೀಗ, ಸೋನಿಯಾ ಗಾಂಧಿ ಅವರೊಂದಿಗೆ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿದ್ದು, ಮಧ್ಯಾಹ್ನದ ನಂತರ ಅವರು ಭಾರತ್ ಜೋಡೋ ಯಾತ್ರೆಯನ್ನು ಸೇರುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Latest Indian news

Popular Stories