ನಾಳೆ ಅಮಿತ್ ಶಾ ಮಂಗಳೂರಿಗೆ ಆಗಮನ

ಪುತ್ತೂರು: ಅಮಿತ್‌ ಶಾ ಅವರು ಕೇಂದ್ರ ಗೃಹ ಸಚಿವರಾದ ಬಳಿಕ ಫೆ. 11ರಂದು ಪ್ರಥಮ ಬಾರಿಗೆ ದ.ಕ. ಜಿಲ್ಲೆಗೆ ಆಗಮಿಸುತ್ತಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿರುವರು.


ಕಣ್ಣೂರಿಗೆ ವಿಮಾನ ಮೂಲಕ ಆಗಮಿಸಿ ಅಲ್ಲಿಂದ ಹೆಲಿಕಾಪ್ಟರ್‌ನಲ್ಲಿ ಈಶ್ವರಮಂಗಲಕ್ಕೆ ಆಗಮಿಸಿ, ಹನುಮಗಿರಿಯಲ್ಲಿ ಭಾರತ ಮಾತಾ ಮಂದಿರ ಲೋಕಾರ್ಪಣೆ ಮಾಡುವರು. ಅನಂತರ ಕ್ಯಾಂಪ್ಕೊದ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಸಹಕಾರಿಗಳು, ಅಡಿಕೆ ಕೃಷಿಕ ರನ್ನು ಉದ್ದೇಶಿಸಿ ಮಾತನಾಡುವರು. ಅನಂತರ ಮಂಗಳೂರಿ ನಲ್ಲಿ ಪಕ್ಷದ ಪ್ರಮುಖರ ಸಭೆಯಲ್ಲಿ ಭಾಗವಹಿಸುವರು.

ಅಮಿತ್‌ ಶಾ ಅವರ ಭೇಟಿ ಹಿನ್ನೆಲೆಯಲ್ಲಿ ಈಗಾ ಗಲೇ ಸಕಲ ಸಿದ್ಧತೆಗಳು ಆಗಿವೆ. ಜನಪ್ರತಿ ನಿಧಿಗಳು ಮತ್ತು ಅಧಿಕಾರಿಗಳು ಪರಿ ಶೀಲನೆ ನಡೆಸಿ ಮಾರ್ಗದರ್ಶನ ನೀಡಿರುವರು.


ಭದ್ರತೆ ಹಿನ್ನೆಲೆಯಲ್ಲಿ ಆಯಕಟ್ಟಿನ ಸ್ಥಳಗಳಲ್ಲಿ ಹದ್ದಿನಗಣ್ಣಿರಿಸಲಾಗಿದೆ. ಕೆಲವು ದಿನಗಳಿಂದ ಕೇರಳ ಗಡಿ ಸಹಿತ ವಿವಿಧೆಡೆ ಪೊಲೀಸರನ್ನು ನಿಯೋಜಿಸಿ ನಿಗಾ ಇರಿಸಲಾಗಿದೆ.

Latest Indian news

Popular Stories