ಕೋಲ್ಕತ್ತಾ: ಪಶ್ಚಿಮ ಬಂಗಾಳ ಗ್ರಾಮ ಪಂಚಾಯತ್ ಚುನಾವಣೆ ಮಂಗಳವಾರ ಪ್ರಕಟವಾಗುತ್ತಿದ್ದು, ರಾಜ್ಯ ಚುನಾವಣಾ ಆಯೋಗದ ಇತ್ತೀಚಿನ ಮಾಹಿತಿಯ ಪ್ರಕಾರ, ಆಡಳಿತರೂಢ ಟಿಎಂಸಿ 12,518-ಗ್ರಾಮ ಪಂಚಾಯತ್ ಸ್ಥಾನಗಳನ್ನು ಗೆದ್ದಿದೆ ಮತ್ತು 3,620 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ರಾಜ್ಯಾದ್ಯಂತ ಒಟ್ಟು 63,229 ಗ್ರಾಮ ಪಂಚಾಯಿತಿಗಳಲ್ಲಿ ಸಮೀಪದ ಪ್ರತಿಸ್ಪರ್ಧಿ ಬಿಜೆಪಿ 2,781 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ ಮತ್ತು 915 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಎಡರಂಗ 959 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಸಿಪಿಐ(ಎಂ) ಏಕಾಂಗಿಯಾಗಿ 910 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಕಾಂಗ್ರೆಸ್ 625 ಸ್ಥಾನಗಳನ್ನು ಗೆದ್ದು, 276ರಲ್ಲಿ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಗ್ರಾಮ ಪಂಚಾಯಿತಿ ಸ್ಥಾನಗಳಲ್ಲದೆ 9,730 ಪಂಚಾಯಿತಿ ಸಮಿತಿ ಸ್ಥಾನಗಳು ಮತ್ತು 928 ಜಿಲ್ಲಾ ಪರಿಷತ್ ಸ್ಥಾನಗಳನ್ನು ಒಳಗೊಂಡಂತೆ ಸುಮಾರು 74,000 ಸ್ಥಾನಗಳಿಗೆ ನಡೆದ ಮೂರು ಹಂತದ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಕಾರ್ಯ ಮಂಗಳವಾರ ಬೆಳಗ್ಗೆ 8 ಗಂಟೆಗೆ ಬಿಗಿ ಭದ್ರತೆಯ ನಡುವೆ ಶಾಂತಿಯುತವಾಗಿ ಪ್ರಾರಂಭವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.