ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಚುನಾವಣಾ ಪ್ರಜಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಂಸದ ಡಿ.ವಿ ಸದಾನಂದಗೌಡ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ ಮತ್ತು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಉಪಸ್ಥಿತರಿದ್ದರು.
ಜನರ ಹಿತದೃಷ್ಟಿಯಿಂದ ಪ್ರಣಾಳಿಕೆ ತಯಾರಿಸಿದ್ದೇವೆ: ಸಿಎಂ ಬೊಮ್ಮಾಯಿ
ಜನರ ಹಿತದೃಷ್ಟಿಯನ್ನಿಕೊಟ್ಟುಕೊಂಡು ಪ್ರಣಾಳಿಕೆ ತಯಾರಿಸಿದ್ದೇವೆ. ಪ್ರಣಾಳಿಕೆ ರಾಜ್ಯ ಸರ್ಕಾರ ನಡೆಯುವ ದಿಕ್ಕನ್ನು ತೋರಿಸುತ್ತದೆ. ಸುಮಾರು 2 ವರ್ಷ ಕೊರೊನಾದಿಂದ ಆರ್ಥಿಕ ಕುಸಿತ ಆಯಿತು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.