ಭೋಪಾಲ್-ದೆಹಲಿ ನಡುವೆ ಸಂಚರಿಸುವ ವಂದೇ ಭಾರತ್ ರೈಲಿನಲ್ಲಿ ಕಾಣಿಸಿಕೊಂಡ ಬೆಂಕಿ

ನವದೆಹಲಿ: ಭೋಪಾಲ್‌ನಿಂದ ದೆಹಲಿಗೆ ತೆರಳುತ್ತಿದ್ದ ವಂದೇ ಭಾರತ್ ರೈಲಿನ ಬೋಗಿಯೊಂದರಲ್ಲಿ ಸೋಮವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ರೈಲು ರಾಣಿ ಕಮಲಾಪತಿ ನಿಲ್ದಾಣದಿಂದ ನವದೆಹಲಿಯ ನಿಜಾಮುದ್ದೀನ್ ಕಡೆಗೆ ಹೊರಟಾಗ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಬೋಗಿ ಸಂಖ್ಯೆ 14 ರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು. ತಕ್ಷಣವೇ ಅಗ್ನಿಶಾಮಕ ದಳದ ಅಧಿಕಾರಿಗಳ ತಂಡ ಬೆಂಕಿ ನಂದಿಸಿ ರೈಲಿನಲ್ಲಿದ್ದ ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಯಿತು.

ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್‌ನಲ್ಲಿ ಮಧ್ಯಪ್ರದೇಶದ ರಾಣಿ ಕಮಲಪತಿ ರೈಲು ನಿಲ್ದಾಣ ಮತ್ತು ದೆಹಲಿಯ ಹಜರತ್ ನಿಜಾಮುದ್ದೀನ್ ರೈಲು ನಿಲ್ದಾಣದ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಉದ್ಘಾಟಿಸಿದರು. ಶನಿವಾರ ಹೊರತುಪಡಿಸಿ ಎಲ್ಲಾ ದಿನಗಳಲ್ಲಿ ಈ ರೈಲು ಕಾರ್ಯನಿರ್ವಹಿಸುತ್ತದೆ.

Latest Indian news

Popular Stories