ವಿಮಾನದಲ್ಲಿ ಮಹಿಳಾ ಪ್ರಯಾಣಿಕಳ ಮೇಲೆ ಮೂತ್ರ ಮಾಡಿದ ಆರೋಪಿ

ನವದೆಹಲಿ: ಇತ್ತೀಚೆಗೆ ವಿಮಾನವೊಂದರಲ್ಲಿ ಪ್ರಯಾಣಿಕರು ಪರಸ್ಪರ ಕೈ ಮಿಲಾಯಿಸಿದ್ದರು. ವಿದೇಶಿ ವಿಮಾನದಲ್ಲಿ ಭಾರತೀಯರು ಈ ರೀತಿ ಹೊಡೆದಾಡಿಕೊಂಡಿದ್ದರು.

ಇದೀಗ ಅದನ್ನು ಮೀರಿಸುವ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಅಮೆರಿಕದ ಕೆನಡಿ ವಿಮಾನ ನಿಲ್ದಾಣದಿಂದ ನವದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಪುರುಷ ಪ್ರಯಾಣಿಕನೊಬ್ಬ ಮಹಿಳಾ ಪ್ರಯಾಣಿಕರೊಬ್ಬರ ಮೇಲೆ ವಿಮಾನದಲ್ಲಿ ಮೂತ್ರ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ನವೆಂಬರ್ 26ರಂದು ಈ ಘಟನೆ ನಡೆದಿದ್ದು ಇದೀಗ ಪೊಲೀಸರಿಗೆ ದೂರು ನೀಡಲಾಗಿದೆ.

ಏರ್ ಇಂಡಿಯಾದ ಬ್ಯುಸಿನೆಸ್ ಕ್ಲಾಸ್ ನಲ್ಲಿ ಈ ಘಟನೆ ಸಂಭವಿಸಿದೆ. ಮದ್ಯದ ಅಮಲಿನಲ್ಲಿದ್ದ ಆರೋಪಿ ಈ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಇದೀಗ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ

Latest Indian news

Popular Stories