ವಿಚಾರವಾದಿ ನರೇಂದ್ರ ದಾಬೋಲ್ಕರ್‌ ಹತ್ಯೆ ಪ್ರಕರಣ: ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಪುಣೆ (ಮಹಾರಾಷ್ಟ್ರ): ವಿಚಾರವಾದಿ ನರೇಂದ್ರ ದಾಬೋಲ್ಕರ್ ಹತ್ಯೆ ಪ್ರಕರಣಕ್ಕೆ‌ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಖುಲಾಸೆ ಮಾಡಿರುವ ನ್ಯಾಯಾಲಯ, ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಕೊಲೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಸಚಿನ್ ಅಂದುರೆ, ಶರದ್ ಕಲಸ್ಕರ್ ಅವರುಗಳಿಗೆ ಜೀವಾವಧಿ ಶಿಕ್ಷೆಯೊಂದಿಗೆ ತಲಾ ಐದು ಲಕ್ಷ ರೂ. ಜುಲ್ಮಾನೆ ವಿಧಿಸಲಾಗಿದೆ.

ಡಾ. ವೀರೇಂದ್ರ ಸಿಂಗ್ ತಾವಡೆ, ವಿಕ್ರಮ್ ಭಾವೆ ಮತ್ತು ಸಂಜೀವ್ ಪುನಲೇಕರ್ ಎಂಬ ಇತರ ಮೂವರು ಆರೋಪಿಗಳನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ಬಿಡುಗಡೆ ಮಾಡಲಾಗಿದೆ.

Latest Indian news

Popular Stories