ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ವಿಮಾನ ಮತ್ತು ವಿಮಾನ ಪ್ರಯಾಣಿಕರದ್ದೇ ಹೆಚ್ಚು ಸುದ್ದಿಯಾಗುತ್ತಿದೆ. ಇದಕ್ಕೆ ಇತ್ತೀಚಿನ ಸೇರ್ಪಡೆ ಒಂದಲ್ಲ ಎರಡಲ್ಲ ಬರೋಬರಿ 50ಕ್ಕೂ ಹೆಚ್ಚು ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಆದ ವಿಮಾನ. ಈ ಘಟನೆ ನಡೆದದ್ದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ
ಬೆಂಗಳೂರಿನಿಂದ ದೆಹಲಿಗೆ ತೆರಳಿದ್ದ ಗೋ ಫಸ್ಟ್ ಸಂಸ್ಥೆಗೆ ಸೇರಿದ ವಿಮಾನ ಮುಂಜಾನೆ 50ಕ್ಕೂ ಹೆಚ್ಚು ಪ್ರಯಾಣಿಕರನ್ನು ಹತ್ತಿಸಿಕೊಳ್ಳದೆ ದೆಹಲಿಗೆ ಹಾರಿದೆ ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟ್ವಿಟರ್ ಮೂಲಕ ನಾಗರಿಕ ವಿಮಾನ ಯಾನ ನಿರ್ದೇಶನಾಲಯಕ್ಕೆ ದೂರು ನೀಡಿದ್ದಾರೆ. ಪ್ರಕರಣ ಸಂಬಂಧ ತನಿಖೆ ನಡೆಸುವುದಾಗಿ ನಾಗರಿಕ ವಿಮಾನಯಾನ ಸಚಿವಾಲಯ ಹೇಳಿದೆ.
ಪ್ರಯಾಣಿಕರು ವಿಮಾನ ನಿಲ್ದಾಣದ ರನ್ ವೇ ಬಳಿ ಬಸ್ ನಲ್ಲಿ ಕುಳಿತಿದ್ದಾಗ ಅವರ ಕಣ್ಣಮುಂದೆ ವಿಮಾನ ದೆಹಲಿಗೆ ತೆರಳಿದೆ ಎಂದು ವರದಿಯಾಗಿದೆ