National

ಡಂಪರ್‌ ಪಲ್ಟಿಯಾಗಿ ಮಗು ಮತ್ತು ಮೂವರು ಮಹಿಳೆಯರ ದುರ್ಮರಣ

ಪಾಲನ್‌ಪುರ್‌, ಫೆ.9 (ಪಿಟಿಐ) ಗುಜರಾತ್‌ನ ಬನಸ್ಕಾಂತ ಜಿಲ್ಲೆಯಲ್ಲಿ ಮರಳು ಸಾಗಿಸುತ್ತಿದ್ದ ಡಂಪರ್‌ ಟ್ರಕ್‌ ಪಲ್ಟಿಯಾಗಿ ಕಾರ್ಮಿಕರ ಗುಂಪಿನ ಮೇಲೆ ಬಿದ್ದ ಪರಿಣಾಮ ಮೂವರು ಮಹಿಳೆಯರು ಮತ್ತು ಪುಟ್ಟ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ.

ಜಿಲ್ಲೆಯ ಖೇಂಗಾರ್‌ಪುರ ಗ್ರಾಮದಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ. ಡಂಪರ್‌ ಕಿರಿದಾದ ಹಾದಿಯಲ್ಲಿ ಸಾಗಲು ಪ್ರಯತ್ನಿಸಿತು ಮತ್ತು ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಕಾರ್ಮಿಕರ ಗುಂಪಿನ ಮೇಲೆ ಬಿದ್ದಿತು ಎಂದು ಉಪ ಪೊಲೀಸ್‌‍ ವರಿಷ್ಠಾಧಿಕಾರಿ ಎಸ್‌‍.ಎಂ.ವರೋಟಾರಿಯಾ ತಿಳಿಸಿದ್ದಾರೆ.

ಕ್ರೇನ್‌ ಮತ್ತು ಬುಲ್ಡೋಜರ್‌ಗಳ ಸಹಾಯದಿಂದ ಟ್ರಕ್‌ನಡಿಯಲ್ಲಿ ಸಿಲುಕಿದ್ದ ಮಹಿಳೆಯರು ಮತ್ತು ಮಗುವನ್ನು ಹೊರತೆಗೆಯಲು ಸುಮಾರು ಎರಡು ಗಂಟೆಗಳ ಕಾಲ ತೆಗೆದುಕೊಂಡಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಂತರ ನಾಲ್ವರನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರು ಮತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಲ್ವರನ್ನು ಆಸ್ಪತ್ರೆಗೆ ಕರೆತರಲಾಯಿತು ಎಂದು ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಜೈದೀಪ್‌ ತ್ರಿವೇದಿ ಹೇಳಿದ್ದಾರೆ.

ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಮತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಮತರನ್ನು ರೇಣುಕಾಬೆನ್‌ ಗಣವಾ (24), ಸೋನಾಲ್ಬೆನ್‌ ನಿನಾಮ (22), ಇಲಾಬೆನ್‌ ಭಭೋರ್‌ (40) ಮತ್ತು ರುದ್ರ (2) ಎಂದು ಗುರುತಿಸಲಾಗಿದೆ.

Related Articles

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button