National

ಹಾಡಹಗಲೇ ಕೋರ್ಟ್ ಆವರಣದಲ್ಲಿಯೇ ವಕೀಲನ ಹತ್ಯೆಗೆ ಯತ್ನ: ಮಚ್ಚಿನಿಂದ ಹಲ್ಲೆ

ಹೊಸೂರು: ಹಾಡಹಗಲೇ ಕೋರ್ಟ್ ಆವರಣದಲ್ಲಿಯೇ ವಕೀಲರೊಬ್ಬರ ಮೇಲೆ ದುಷ್ಕರ್ಮಿಗಳು ಮರಣಾಂತಿಕವಾಗಿ ಹಲ್ಲೆ ನಡೆಸಿ, ಹತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಹೊಸೂರಿನಲ್ಲಿ ನಡೆದಿದೆ.

ವಕೀಲ ಕಣ್ಣನ್ (30) ಎಂಬುವವರ ಮೇಲೆ ಮಚ್ಚಿನಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

ಜಮೀನು ವಿವಾದ ಹಿನ್ನೆಲೆಯಲ್ಲಿ ವಕೀಲನ ಮೇಲೆ ಹಲ್ಲೆ ನಡೆದುಇರುವ ಶಂಕೆ ವ್ಯಕ್ತವಾಗಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ವಕೀಲ ಕಣ್ಣನ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ವಕೀಲ ಕಣ್ಣನ್ ಸಾವು-ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಹೊಸೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button