ಲೋಕಸಭೆ ಚುನಾವಣೆ ಗೆಲ್ಲಲು ಬಿಜೆಪಿ ಎಲ್ಲರನ್ನೂ ಜೈಲಿಗೆ ಹಾಕುತ್ತಿದೆ: ಮಮತಾ ಬ್ಯಾನರ್ಜಿ

ಹಗರಣ ಪ್ರಕರಣದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದ ಬೆನ್ನಲ್ಲೇ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಿಜೆಪಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ವಿರೋಧ ಪಕ್ಷದ ನಾಯಕರನ್ನು ಜೈಲಿಗೆ ಹಾಕುತ್ತಿದೆ ಎಂದು ಕಿಡಿಕಾರಿದ್ದಾರೆ.

ನಾಡಿಯಾ ಜಿಲ್ಲೆಯ ಶಾಂತಿಪುರದಲ್ಲಿ ಸಾರ್ವಜನಿಕ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಬ್ಯಾನರ್ಜಿ, ನನ್ನನ್ನು ಜೈಲಿಗೆ ಕಳುಹಿಸಿದರೆ ಅದರಿಂದ ಹೊರಬರುತ್ತೇನೆ ಎಂದು ಹೇಳಿದರು. ರಾಜ್ಯದಲ್ಲಿ ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಲು ನಾವು ಉತ್ಸುಕವಾಗಿದ್ದೇವು ಆದರೆ ಆ ಪ್ರಸ್ತಾಪವನ್ನು ಕಾಂಗ್ರೆಸ್ ತಿರಸ್ಕರಿಸಿತು.

ನಾವು ಮೈತ್ರಿ ಬಯಸಿದ್ದೆವು, ಆದರೆ ಕಾಂಗ್ರೆಸ್ ಅದಕ್ಕೆ ಸಿದ್ಧವಿಲ್ಲ ಎಂದು ಮಮತಾ ಹೇಳಿದ್ದಾರೆ. ಚುನಾವಣೆಯಲ್ಲಿ ಬಿಜೆಪಿಗೆ ಸಹಾಯ ಮಾಡಲು ಅವರು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ವಾದಿ) ಜೊತೆ ಕೈಜೋಡಿಸಿದ್ದಾರೆ ಎಂದು ಆರೋಪಿಸಿದರು.

ಚುನಾವಣೆಯ ನಂತರ ಪ್ರಾದೇಶಿಕ ಪಕ್ಷಗಳು ಒಟ್ಟಾಗಿ ಹೇಗೆ ಮತ್ತು ಏನು ಮಾಡುತ್ತವೆ ಎಂಬುದನ್ನು ನಿರ್ಧರಿಸಲಾಗುತ್ತದೆ. ಇದೇ ವೇಳೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಮಮತಾ ಬ್ಯಾನರ್ಜಿ ಸ್ಪಷ್ಟಪಡಿಸಿದ್ದಾರೆ.

Latest Indian news

Popular Stories