
ನದಿಗೆ ಬಸ್ ಉರುಳಿ ಬಿದ್ದು; ಇಬ್ಬರು ಮೃತ್ಯು,11 ಮಂದಿ ನಾಪತ್ತೆ
ಉತ್ತರಾಖಂಡನ ರುದ್ರಪ್ರಯಾಗ್ ದಲ್ಲಿ 18 ಸೀಟರ್ ಬಸ್ಸೊಂದು ಅಲಕಾನಂದ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ ಇಬ್ಬರು ಮೃತಪಟ್ಟ ಘಟನೆ ಗುರುವಾರ (ಜೂ.26) ಬೆಳಗ್ಗೆ ನಡೆದಿದೆ. ಘಟನೆಯಲ್ಲಿ 11 ಮಂದಿ ನಾಪತ್ತೆಯಾಗಿದ್ದಾರೆ.
ಸ್ಥಳಕ್ಕೆ ಪೊಲೀಸರು ಮತ್ತು ಎಸ್ಡಿಆರ್ಎಫ್ ಪಡೆ ದೌಡಾಯಿಸಿದ್ದು, ರಕ್ಷಣಾ ಕಾರ್ಯ ಆರಂಭವಾಗಿದೆ.
ಆರು ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ.
ಬಸ್ಸು ರುದ್ರ ಪ್ರಯಾಗದಿಂದ ಹೊರಟ್ಟಿತ್ತು. ಬೆಟ್ಟಗಳನ್ನು ಏರುವ ಸಮಯದಲ್ಲಿ ನಿಯಂತ್ರಣ ತಪ್ಪಿ ಅಲಕಾನಂದ ನದಿಗೆ ಉರುಳಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪೊಲೀಸರು ಮತ್ತು ವಿಪತ್ತು ನಿರ್ವಹಣಾ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯವನ್ನು ಪ್ರಾರಂಭಿಸಿದವು. ಗಾಯಾಳುಗಳಲ್ಲಿ ಕೆಲವರನ್ನು ಹೊರತೆಗೆದು ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.
ಎಸ್ಡಿಆರ್ಎಫ್ ಪಡೆ ಮತ್ತು ಅಗಸ್ತ್ಯಮುನಿ, ರಟುಡಾ ಮತ್ತು ಗೊಚಾರ್ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ. ಆದರೆ ನೀರಿನ ಹರಿವು ತೀವ್ರವಾಗಿದ್ದು, ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿದೆ.




