CAA: ಮತ್ತೆ ಮುನ್ನಲೆಗೆ ಬಂದ ವಿವಾದಿತ ಸಿಎಎ; ಲೋಕಸಭೆ ಚುನಾವಣೆ ಘೋಷಣೆಗೂ ಮುನ್ನವೇ ಜಾರಿ!

ನವದೆಹಲಿ, ಫೆಬ್ರವರಿ.29: ಲೋಕಸಭೆ ಚುನಾವಣೆಗೆ ದೇಶ ಸದ್ದಾಗುತ್ತಿರುವ ಬೆನ್ನಲ್ಲೇ ಮಾದರಿ ನೀತಿ ಸಂಹಿತೆ ಜಾರಿಗೆ ಬರುವ ಮೊದಲು ಕೇಂದ್ರ ಸರ್ಕಾರವು ಯಾವುದೇ ಸಮಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ನಿಯಮಗಳನ್ನು ಜಾರಿಗೆ ತರಬಹುದು ಎಂದು ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.2019 ರ ಡಿಸೆಂಬರ್‌ನಲ್ಲಿ ಸಂಸತ್ತು ಜಾರಿಗೊಳಿಸಿದ ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ದೇಶದಲ್ಲಿ ಭಾರಿ ಪ್ರತಿಭಟನೆ ಕಾರಣವಾಗಿತ್ತು.

ದೇಶದ ಕೆಲವು ಭಾಗಗಳಲ್ಲಿ ಪ್ರತಿಭಟನೆಗಳನ್ನು ಹುಟ್ಟುಹಾಕಿದ ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ಅನುಷ್ಠಾನದ ನಿಯಮಗಳನ್ನು ಮುಂದಿನ ಹದಿನೈದು ದಿನಗಳೊಳಗೆ ಅಥವಾ ಅದಕ್ಕಿಂತ ಹೆಚ್ಚು ಸಮಯದೊಳಗೆ ಜಾರಿಗೊಳಿಸಲಾಗುವುದು ಎಂದು ಗೃಹ ವ್ಯವಹಾರಗಳ ಸಚಿವಾಲಯದ ಮೂಲಗಳು ತಿಳಿಸಿವೆ.

ಈ ತಿಂಗಳ ಆರಂಭದಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 2019 ರಲ್ಲಿ ಜಾರಿಗೊಳಿಸಲಾದ ಸಿಎಎ ನಿಯಮಗಳನ್ನು ಹೊರಡಿಸಿದ ನಂತರ ಈ ವರ್ಷ ಲೋಕಸಭೆ ಚುನಾವಣೆಗೆ ಮೊದಲು ಜಾರಿಗೆ ತರಲಾಗುವುದು ಎಂದು ಹೇಳಿದರು. ಇದರ ಬೆನ್ನಲ್ಲೇ “ನಾನು ನಿಮಗೆ ನಿರ್ದಿಷ್ಟ ದಿನಾಂಕವನ್ನು ಹೇಳಲಾರೆ, ಆದರೆ ಮಾದರಿ ನೀತಿ ಸಂಹಿತೆ (MCC) ಜಾರಿಗೆ ಬರುವ ಮೊದಲು ತಿಳಿಸಲಾಗುವುದು” ಎಂದು MHA ನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾರ್ಚ್ 11 ರಿಂದ ಬೆಂಗಳೂರು-ಕೊಯಮತ್ತೂರು ವಂದೇ ಭಾರತ್ ಟೈಂ ಚೇಂಜ್ಮುಸ್ಲಿಂ ಸಹೋದರರನ್ನು ದಾರಿತಪ್ಪಿಸಲಾಗುತ್ತಿದೆ!ಚುನಾವಣಾ ಆಯೋಗವು ಚುನಾವಣೆಗಳನ್ನು ಘೋಷಿಸಿದಾಗ MCC ಜಾರಿಗೆ ಬರುತ್ತದೆ. ಮುಂದಿನ ತಿಂಗಳು ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗುವ ನಿರೀಕ್ಷೆ ಇದೆ.

Latest Indian news

Popular Stories