ರೆಮಲ್‌ ಚಂಡಮಾರುತಕ್ಕೆ 22 ಬಲಿ, 30,000 ಮನೆಗೆ ಹಾನಿ

ಕೋಲ್ಕತಾ/ಢಾಕಾ(ಮೇ.28): ಗಂಟೆಗೆ 135 ಕಿ.ಮೀ. ವೇಗದಲ್ಲಿ ಭಾನುವಾರ ಮಧ್ಯರಾತ್ರಿ ಪಶ್ಚಿಮ ಬಂಗಾಳ- ಬಾಂಗ್ಲಾದೇಶ ಕರಾವಳಿಗೆ ಅಪ್ಪಳಿಸಿದ ಈ ವರ್ಷದ ಮೊದಲ ಚಂಡಮಾರುತ ‘ರೆಮಲ್‌’ನಿಂದ ಅಪಾರ ಪ್ರಮಾಣದ ಸಾವು, ನೋವು, ಆಸ್ತಿ-ಪಾಸ್ತಿ ಹಾನಿ ಸಂಭವಿಸಿದೆ. ಭಾನುವಾರ ಬಾಂಗ್ಲಾ, ಬಂಗಾಳದ ಮೇಲೆ ಅಪ್ಪಳಿಸಿದ್ದ ಚಂಡಮಾರುತ ಭಾರೀ ಅನಾಹುತ ಸೃಷ್ಟಿಸಿದ ಬಳಿಕ ಸೋಮವಾರ ಬೆಳಗಿನ ವೇಳೆಗೆ ತನ್ನ ತೀವ್ರತೆ ಕಳೆದುಕೊಂಡಿದೆ.

ಆದರೆ ಪ್ರಭಾವ ಹೊಂದಿದ್ದ ವೇಳೆ ಪಶ್ಚಿಮ ಬಂಗಾಳದಲ್ಲಿ ಚಂಡಮಾರುತದಿಂದ ಸೃಷ್ಟಿಯಾದ ಬಿರುಗಾಳಿ ಮಳೆಗೆ 6 ಜನರು ಬಲಿಯಾಗಿದ್ದರೆ, ಅತ್ತ ಬಾಂಗ್ಲಾದೇಶದಲ್ಲಿ 16 ಮಂದಿ ಜೀವತೆತ್ತಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಲಕ್ಷಾಂತರ ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ ಪರಿಣಾಮವಾಗಿ ಹೆಚ್ಚಿನ ಸಾವು- ನೋವು ತಪ್ಪಿದೆ.

ಈ ನಡುವೆ, ಪಶ್ಚಿಮ ಬಂಗಾಳದಲ್ಲಿ ಕೆಲವೊಂದು ಕಡೆ 30 ಸೆಂ.ಮೀ.ವರೆಗೂ ಮಳೆಯಾಗಿದೆ. ಧಾರಾಕಾರ ಮಳೆ, ಬಿರುಗಾಳಿ ಅಬ್ಬರದಿಂದಾಗಿ ಪಶ್ಚಿಮ ಬಂಗಾಳದಲ್ಲಿ ಅಪಾರ ಹಾನಿಯಾಗಿದೆ. 2500 ಮನೆಗಳು ಪೂರ್ಣವಾಗಿ ಹಾನಿಗೊಳಗಾಗಿದ್ದರೆ, 27500 ಮನೆಗಳು ಭಾಗಶಃ ಹಾನಿಗೆ ತುತ್ತಾಗಿದೆ. 2500ಕ್ಕೂ ಮರಗಳು ಧರೆಗೆ ಉರುಳಿವೆ. 337 ವಿದ್ಯುತ್‌ ಕಂಬಗಳು ಕುಸಿದು ಬಿದ್ದಿವೆ. ಇದು ಪ್ರಾಥಮಿಕ ಮಾಹಿತಿಯಾಗಿದ್ದು, ಪೂರ್ಣ ಪರಿಶೀಲನೆ ಮುಗಿದ ಬಳಿಕ ನಿಖರ ಮಾಹಿತಿ ದೊರೆಯಲಿದೆ.

Latest Indian news

Popular Stories