ದೆಹಲಿ-ಮೀರತ್ ಎಕ್ಸ್​ಪ್ರೆಸ್​ ವೇಯಲ್ಲಿ ಅಪಘಾತ: ಶಾಲಾ ಬಸ್-ಕಾರು ನಡುವೆ ಡಿಕ್ಕಿ, 6 ಮಂದಿ ಮೃತ್ಯು

ಅಪಘಾತ ಸುದ್ದಿಗಳು:

ನವದೆಹಲಿ: ಗಾಜಿಯಾಬಾದ್​ನ ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 6  ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ.

ಬಸ್ ಮತ್ತು ಕಾರಿನ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದ ಎಂದು ತಿಳಿದುಬಂದಿದೆ. ಘಟನೆಯಲ್ಲಿ 8 ವರ್ಷದ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ.

ಗಾಯಗೊಂಡಿರುವ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Latest Indian news

Popular Stories