ಸಿಎಎ ಅನುಷ್ಠಾನಕ್ಕೆ ಮೊದಲ ಹೆಜ್ಜೆ: 14 ಮಂದಿಗೆ ಭಾರತೀಯ ಪೌರತ್ವ ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ಕೇಂದ್ರ ಗೃಹ ಸಚಿವಾಲಯವು ಸಿಎಎ ಅಡಿಯಲ್ಲಿ ಪೌರತ್ವ ಪ್ರಮಾಣಪತ್ರಗಳ ಮೊದಲ ಸೆಟ್ ಅನ್ನು ನೀಡಿದೆ. CAAಯ ಮೊದಲ ಹಂತದಲ್ಲಿ ಕೇಂದ್ರ ಸರ್ಕಾರವು 14 ಜನರಿಗೆ ಭಾರತೀಯ ಪೌರತ್ವವನ್ನು ನೀಡಿದೆ.

ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು ನವದೆಹಲಿಯಲ್ಲಿ ಮೊದಲ 14 ಜನರಿಗೆ ಸಿಎಎ ಅಡಿಯಲ್ಲಿ ಪೌರತ್ವ ಪ್ರಮಾಣಪತ್ರಗಳನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿಗಳು, ನಿರ್ದೇಶಕರು (ಐಬಿ), ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅಡಿಯಲ್ಲಿ ಪೌರತ್ವ ಪ್ರಮಾಣಪತ್ರಗಳ ಮೊದಲ ಸೆಟ್ ಅನ್ನು ಬುಧವಾರ ಬಿಡುಗಡೆ ಮಾಡಲಾಗಿದೆ. ಕೇಂದ್ರ ಸರ್ಕಾರದಿಂದ 14 ಮಂದಿಗೆ ಪೌರತ್ವ ಪ್ರಮಾಣ ಪತ್ರ ವಿತರಿಸಲಾಗಿದೆ. ಸಿಎಎ ಪ್ರಮಾಣಪತ್ರವನ್ನು ನೀಡಿದ ನಂತರ, ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಕಿರುಕುಳಕ್ಕೊಳಗಾದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ರಾಷ್ಟ್ರೀಯತೆಯನ್ನು ನೀಡುವ ಪ್ರಕ್ರಿಯೆಯು ಪ್ರಾರಂಭವಾಯಿತು.

ಸಿಎಎ ಕಾನೂನಾಗಿ ರೂಪುಗೊಂಡ ನಂತರ ರಾಷ್ಟ್ರಪತಿಗಳ ಅಂಕಿತ ಸಿಕ್ಕಿತ್ತು. ಆದರೆ ನಾಲ್ಕು ವರ್ಷಗಳಿಗೂ ಹೆಚ್ಚು ವಿಳಂಬದ ನಂತರ ಈ ವರ್ಷ ಮಾರ್ಚ್ 11ರಂದು ಭಾರತೀಯ ಪೌರತ್ವವನ್ನು ನೀಡುವ ನಿಯಮಗಳನ್ನು ಬಿಡುಗಡೆ ಮಾಡಲಾಯಿತು.

Latest Indian news

Popular Stories