ಉಡುಪಿ: ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಮಾರ್ಚ್ 13 ರಂದು ಆಯೋಜಿಸಿರುವ ಗ್ಯಾರಂಟಿ ಯೋಜನೆಗಳ ಸಮಾವೇಶ ಕಾರ್ಯಕ್ರಮಕ್ಕೆ ನಗರದ ಎಂ.ಜಿ.ಎಂ ಕಾಲೇಜಿನ ಆಟದ ಮೈದಾನದಲ್ಲಿ ವೇದಿಕೆ ಸಜ್ಜುಗೊಂಡಿದೆ.
ಮಾರ್ಚ್ 13 ರಂದು ಬೆಳಗ್ಗೆ 11 ಗಂಟೆಗೆ ಉಡುಪಿ ನಗರದ ಕುಂಜಿಬೆಟ್ಟುವಿನ ಎಂ.ಜಿ.ಎಂ ಕಾಲೇಜು ಆಟದ ಮೈದಾನದಲ್ಲಿ ನಡೆಯಲಿರುವ ಗ್ಯಾರಂಟಿ ಯೋಜನೆಗಳ ಸಮಾವೇಶ ಕಾರ್ಯಕ್ರಮಕ್ಕೆ ಜಿಲ್ಲೆಯ ವಿವಿಧ ಭಾಗಗಳಿಂದ ಸಹಸ್ರಾರು ಫಲಾನುಭವಿಗಳು ಆಗಮಿಸಲಿದ್ದಾರೆ.
ಕರ್ನಾಟಕ ಸರಕಾರದ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಮಂತ್ರಿಗಳು ಸಹ ಭಾಗವಹಿಸಲಿದ್ದು, ಇದಕ್ಕಾಗಿ ಬೃಹತ್ ಪೆಂಡಾಲ್ ಅನ್ನು ನಿರ್ಮಿಸಲಾಗಿದೆ. ಜನಸಾಮಾನ್ಯರಿಗೆ ಆಸನದ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಊಟ ಉಪಾಹಾರದ ವ್ಯವಸ್ಥೆ ಹಾಗೂ ಕಾರ್ಯಕ್ರಮಕ್ಕೆ ಬಂದು ಹೋಗಲು ಬಸ್‌ನ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಿದೆ.
ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಪಾರ್ಕಿಂಗ್ ವ್ಯವಸ್ಥೆಯನ್ನು ಜಿಲ್ಲಾ ಪೊಲೀಸ್ ಇಲಾಖೆ ಕೈಗೊಂಡಿದೆ. ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಸಮಾವೇಶದಲ್ಲಿ ಫಲಾನುಭವಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜಿಲ್ಲಾಧಿಕಾರಿಗಳಾದ ಡಾ. ಕೆ ವಿದ್ಯಾ ಕುಮಾರಿ ಅವರು ಮನವಿ ಮಾಡಿದ್ದಾರೆ.
ಗ್ಯಾರಂಟಿ ಸಮಾವೇಶ:
ಜಿಲ್ಲಾಡಳಿತ ಹಾಗೂ ಜಿಲ್ಲಾಪಂಚಾಯತ್ ಉಡುಪಿ ಜಿಲ್ಲೆ ಇವರ ವತಿಯಿಂದ ಗ್ಯಾರಂಟಿ ಯೋಜನೆಗಳ ಸಮಾವೇಶ ಹಾಗೂ ಜಿಲ್ಲೆಯ ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭವನ್ನು ಮಾರ್ಚ್ 13 ರಂದು ಬೆಳಗ್ಗೆ 11 ಗಂಟೆಗೆ ನಗರದ ಕುಂಜಿಬೆಟ್ಟುವಿನ ಮಹಾತ್ಮ ಗಾಂಧೀ ಮೆಮೋರಿಯಲ್ ಕಾಲೇಜಿನ ಆರೂರು ಲಕ್ಷ್ಮೀ ನಾರಾಯಣ ರಾವ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳಕರ್, ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಕೆ.ಹೆಚ್.ಮುನಿಯಪ್ಪ, ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ, ಇಂಧನ ಸಚಿವರಾದ ಕೆ.ಜೆ ಜಾರ್ಜ್, ಕಂದಾಯ ಸಚಿವ ಕೃಷ್ಣ ಭೈರೇಗೌಡ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್, ಹಿಂದುಳಿದ ವರ್ಗಗಳ ಇಲಾಖೆ ಸಚಿವ ತಂಗಡಗಿ ಶಿವರಾಜ್ ಸಂಗಪ್ಪ, ಶಿಕ್ಷಣ ಸಚಿವ ಎಸ್ ಮಧು ಬಂಗಾರಪ್ಪ ಉನ್ನತ ಶಿಕ್ಷಣ ಸಚಿವರಾದ ಡಾ.ಎಮ್.ಸಿ ಸುಧಾಕರ್, ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಬಿ.ವೈ ರಾಘವೇಂದ್ರ, ವಿಧಾನಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ, ಎಸ್.ಎಲ್ ಬೋಜೇಗೌಡ, ಡಾ. ತೇಜಸ್ವಿನಿ ಗೌಡ ಹಾಗೂ ಮಂಜುನಾಥ ಭಂಡಾರಿ, ಶಾಸಕರಾದ ಸುನೀಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ. ಕಿರಣ್ ಕುಮಾರ್ ಕೊಡ್ಗಿ, ಗುರ್ಮೆ ಸುರೇಶ್ ಶೆಟ್ಟಿ, ಇಂಧನ ಇಲಾಖೆಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಹಾಗೂ ಕೌಶಲಾ್ಯಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಉವಾ ಮಹಾದೇವನ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಕಂದಾಯ ಇಲಾಖೆಯ ಸಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಕೆ. ಪಿ ಎಲ್. ಸಿ ಲಿಮಿಟೆಡ್ ನ ಅಧ್ಯಕ್ಷ ರಾಜೇಂದ್ರ ಕುಮಾರ್ ಕಟಾರಿಯಾ, ಕಾರ್ಮಿಕ ಇಲಾಖೆಯ ಸರಕಾರದ ಪ್ರಧಾನ ಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್, ಉನ್ನತ ಶಿಕ್ಷಣ ಇಲಾಖೆಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಶ್ರೀಕರ ಎಮ್ ಎಸ್, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್, ಸಾರಿಗೆ ನಿಗಮ ಸರಕಾರದ ಕಾರ್ಯದರ್ಶಿ ಎನ್ .ವಿ.ಪ್ರಸಾದ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ ರೇಜು, ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆಹಾರ ನಾಗರೀಕ ಸರಬರಾಜು ಗ್ರಾಹಕರ ವ್ಯವಹಾರ ತೂಕ ಮತ್ತು ಮಾಪನ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಡಾ. ಜಿ. ಸಿ ಪ್ರಕಾಶ್, ಕಾಲೇಜು ಮತ್ತು ಶಿಕ್ಷಣ ಇಲಾಖೆಯ ಆಯುಕ್ತ ಜಗದೀಶ್ ಜಿ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ