ಹೈಕೋರ್ಟ್‌ ಜಡ್ಜ್ ರಾಜೀನಾಮೆ, ಬಿಜೆಪಿ ಸೇರುವ ಘೋಷಣೆ

ನವದೆಹಲಿ, ಮಾರ್ಚ್ 05: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ನಿಂದ ಸ್ಪರ್ಧೆ ಮಾಡಲು ಪೈಪೋಟಿ ಜೋರಾಗಿದೆ. ಲೋಕಸಭೆ ಚುನಾವಣೆ 2024ರ ವೇಳಾಪಟ್ಟಿ ಘೋಷಣೆಗೂ ಮೊದಲೇ ನ್ಯಾಯಮೂರ್ತಿಯೊಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರುವುದಾಗಿ ಘೋಷಣೆ ಮಾಡಿದ್ದಾರೆ.ಪಶ್ಚಿಮ ಬಂಗಾಳದ ಕೋಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿಯಾದ ಅಭಿಜಿತ್ ಗಂಗೋಪಾಧ್ಯಾಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. Lok Sabha Election: ಕಾಂಗ್ರೆಸ್‌ಗೆ ಹಿನ್ನಡೆ; ಪಶ್ಚಿಮ ಬಂಗಾಳದ ಎಲ್ಲಾ 42 ಸ್ಥಾನಗಳಲ್ಲಿ ಸ್ಪರ್ಧೆಗೆ ಟಿಎಂಸಿ ನಿರ್ಧಾರ ಗುರುವಾರ ಬಿಜೆಪಿ ಸೇರುತ್ತೇನೆ ಎಂದು ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಘೋಷಣೆ ಮಾಡಿದ್ದಾರೆ. ಅಭಿಜಿತ್ ಗಂಗೋಪಾಧ್ಯಾಯ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನೀಡಿದ್ದ ತೀರ್ಪುಗಳು ಚರ್ಚೆಗೆ ಕಾರಣವಾಗಿದ್ದವು. ಒಂದು ಸ್ಥಾನವನ್ನು ನೀಡಲ್ಲ: ಕಾಂಗ್ರೆಸ್ ವಿರುದ್ಧ ಮಮತಾ ಬ್ಯಾನರ್ಜಿ ವಾಗ್ದಾಳಿ ಮಾರ್ಚ್‌ 4ರಂದು ರಾಜೀನಾಮೆ ನೀಡುತ್ತೇನೆ ಎಂದು ಅಭಿಜಿತ್ ಗಂಗೋಪಾಧ್ಯಾಯ ಈ ಹಿಂದೆಯೇ ಘೋಷಣೆ ಮಾಡಿದ್ದರು.

ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ, “ಸಮಾಜದಲ್ಲಿರುವ ದುರ್ಬಲ ವರ್ಗದವರಿಗೆ ಸಹಾಯ ಮಾಡಲು ರಾಜಕಾರಣ ಸರಿಯಾದ ಮಾರ್ಗ. ಕಳೆದ ಎರಡು ವರ್ಷಗಳಲ್ಲಿ ಹಲವಾರು ಭ್ರಷ್ಟಾಚಾರ ಪ್ರಕರಣಗಳನ್ನು ನೋಡಿದ್ದೇನೆ. ವಿಶೇಷವಾಗಿ ಶಿಕ್ಷಣ ಕ್ಷೇತ್ರದಲ್ಲಿ” ಎಂದು ಹೇಳಿದ್ದಾರೆ.ಈ ವರ್ಷ ಅಂತ್ಯದಲ್ಲಿ ನಿವೃತ್ತರಾಗಲಿದ್ದ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವಧಿಗೂ ಮೊದಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. “ನಾನು ಈಗ ಬಹುಸಂಖ್ಯಾತ ಜನರ ಜೊತೆ ಹೋಗುತ್ತೇನೆ” ಎಂದು ಅವರು ತಿಳಿಸಿದ್ದಾರೆ.ಪಶ್ಚಿಮ ಬಂಗಾಳದಲ್ಲಿ 42 ಲೋಕಸಭಾ ಕ್ಷೇತ್ರಗಳಿವೆ.

Latest Indian news

Popular Stories