National
ಹಿಮಾಚಲ: ಮಂಡಿಯಲ್ಲಿ ಕಣಿವೆಗೆ ಉರುಳಿದ ಕಾರು, ಐವರು ಸಾವು

ಮಂಡಿ :ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಚೌಹಾರ್ ಕಣಿವೆಯಲ್ಲಿ ಕಾರೊಂದು ಕಣಿವೆಗೆ ಉರುಳಿ ಬಿದ್ದಿದ್ದು, ಭೀಕರ ಅಪಘಾತದಲ್ಲಿ 16 ವರ್ಷದ ಬಾಲಕ ಸೇರಿದಂತೆ ಐವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಭಾನುವಾರ ಹೇಳಿದ್ದಾರೆ.
ಶನಿವಾರ ರಾತ್ರಿ ಈ ಘಟನೆ ನಡೆದಿದ್ದು, ಕಾರು ಮದುವೆ ಸಮಾರಂಭದಿಂದ ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ.
ಮೃತರಲ್ಲಿ ಒಬ್ಬನನ್ನು 16 ವರ್ಷದ ಬಾಲಕ ಎಂದು ಗುರುತಿಸಲಾಗಿದ್ದು, ಉಳಿದ ನಾಲ್ವರು 20 ರಿಂದ 25 ವರ್ಷ ವಯಸ್ಸಿನವರು ಎಂದು ಮಂಡಿ ಪೊಲೀಸ್ ವರಿಷ್ಠಾಧಿಕಾರಿ ಸಾಕ್ಷಿ ವರ್ಮಾ ತಿಳಿಸಿದ್ದಾರೆ.