ಹಿರಿಯೂರು: ನವೋದಯ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಹಿರಿಯೂರು, ಜುಲೈ, 08: ತಾಲೂಕಿನ ಉಡುವಳ್ಳಿ ಬಳಿ ಇರುವ ನವೋದಯ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಹೊಳಲ್ಕೆರೆ ತಾಲ್ಲೂಕಿನ ಕೆಂಗುಂಟೆ ಗ್ರಾಮದ ಪ್ರೇಮ್ ಸಾಗರ್ (13) ವರ್ಷ ಎಂದು ಗುರುತಿಸಲಾಗಿದೆ.

ಮೃತ ವಿದ್ಯಾರ್ಥಿಯು 8ನೇ ತೆರಿಗೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದನು. ಸೀನಿಯರ್ ವಿದ್ಯಾರ್ಥಿಗಳು ರೇಗಿಸುತ್ತಿದ್ದರು ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದನೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.

ಆದರೆ ಪೋಲಿಸರ ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ಮೃತ ಯುವಕನ ದೇಹವನ್ನು ನಗರದ ಸರ್ಕಾರಿ ಆಸ್ಪತ್ರೆ ಶವಾಗಾರದಲ್ಲಿ ಮೃತದೇಹ ಇಡಲಾಗಿದೆ. ಸದ್ಯ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎನ್ನಲಾಗಿದೆ.

Latest Indian news

Popular Stories