ಕೇಂದ್ರ ಸರ್ಕಾರದ ಸಂಪುಟ ಕಾರ್ಯದರ್ಶಿಯಾಗಿ IAS ಅಧಿಕಾರಿ ‘ಟಿ.ವಿ.ಸೋಮನಾಥನ್’ ನೇಮಕ

ನವದೆಹಲಿ: 1987 ರ ಬ್ಯಾಚ್ ಭಾರತೀಯ ಆಡಳಿತ ಸೇವೆಗಳ (ಐಎಎಸ್) ಅಧಿಕಾರಿ ಟಿ.ವಿ.ಸೋಮನಾಥನ್ ಅವರನ್ನು ನರೇಂದ್ರ ಮೋದಿ ಸರ್ಕಾರ ಶನಿವಾರ ಎರಡು ವರ್ಷಗಳ ಅವಧಿಗೆ ಕ್ಯಾಬಿನೆಟ್ ಕಾರ್ಯದರ್ಶಿಯಾಗಿ ನೇಮಿಸಿದೆ.

1982ರ ಬ್ಯಾಚ್ ನ ಐಎಎಸ್ ಅಧಿಕಾರಿ ರಾಜೀವ್ ಗೌಬಾ ಅವರು ಸಂಪುಟ ಕಾರ್ಯದರ್ಶಿಯಾಗಿ ಐದು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.

ಐಎಎಸ್ (ಟಿಎನ್:87) ಶ್ರೀ ಟಿವಿ ಸೋಮನಾಥನ್ ಅವರನ್ನು ಕ್ಯಾಬಿನೆಟ್ ಸಚಿವಾಲಯದಲ್ಲಿ ವಿಶೇಷ ಕರ್ತವ್ಯದ ಅಧಿಕಾರಿಯಾಗಿ ನೇಮಕ ಮಾಡಲು ಸಂಪುಟದ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

Latest Indian news

Popular Stories