ದೇಶದಲ್ಲಿ ‘ಕಾಂಗ್ರೆಸ್ ಪಕ್ಷ’ ಅಧಿಕಾರಕ್ಕೆ ಬಂದರೆ ರೈತರಿಗೆ ‘ಕನಿಷ್ಠ ಬೆಂಬಲ ಬೆಲೆ ಕಾನೂನು’ ಜಾರಿ- ರಾಹುಲ್ ಗಾಂಧಿ ಘೋಷಣೆ

ನವದೆಹಲಿ: ದೇಶದಲ್ಲಿ ಲೋಕಸಭಾ ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಪಕ್ಷದಿಂದ ಜನತೆಗೆ ಗ್ಯಾರಂಟಿ ಯೋಜನೆಯೊಂದನ್ನು ಘೋಷಣೆ ಮಾಡಲಾಗಿದೆ. ಅದೇ ರೈತರಿಗೆ ಬೆಳೆಗಳ ಮೇಲೆ ಎಂಎಸ್ಪಿಯ ಕಾನೂನು ಖಾತರಿ ನೀಡಲು ಕಾಂಗ್ರೆಸ್ ನಿರ್ಧರಿಸಿರೋದು ಆಗಿದೆ.

ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು, ರೈತ ಸಹೋದರರೇ, ಇಂದು ಐತಿಹಾಸಿಕ ದಿನ,ಸ್ವಾಮಿನಾಥನ್ ಆಯೋಗದ ಪ್ರಕಾರ ಪ್ರತಿಯೊಬ್ಬ ರೈತರಿಗೆ ಬೆಳೆಗಳ ಮೇಲೆ ಎಂಎಸ್ಪಿಯ ಕಾನೂನು ಖಾತರಿ ನೀಡಲು ಕಾಂಗ್ರೆಸ್ ನಿರ್ಧರಿಸಿದೆ. ಈ ಕ್ರಮವು 15 ಕೋಟಿ ರೈತ ಕುಟುಂಬಗಳ ಸಮೃದ್ಧಿಯನ್ನು ಖಚಿತಪಡಿಸುವ ಮೂಲಕ ಅವರ ಜೀವನವನ್ನು ಬದಲಾಯಿಸುತ್ತದೆ. ಇದು ನ್ಯಾಯದ ಹಾದಿಯಲ್ಲಿ ಕಾಂಗ್ರೆಸ್ ನ ಮೊದಲ ಖಾತರಿಯಾಗಿದೆ ಎಂದು ಹೇಳಿದ್ದಾರೆ.

Latest Indian news

Popular Stories