ನವ ದೆಹಲಿ:ಕೇರಳದ ಮಲಪ್ಪುರಂ ಜಿಲ್ಲೆಯ ಕಡಲತೀರದ ಬಳಿ ಭಾನುವಾರ ಸಂಜೆ ಡಬಲ್ ಡೆಕ್ಕರ್ ದೋಣಿ ಮುಳುಗಿ ಏಳು ಮಕ್ಕಳು ಸೇರಿದಂತೆ ಕನಿಷ್ಠ 22 ಜನರು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಜಿಲ್ಲೆಯ ತಾನೂರ್ ಪ್ರದೇಶದ ತುವಲ್ತಿರಾಮ್ ಬೀಚ್ ಬಳಿ ಸಂಜೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಬೋಟ್ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದೋಣಿಯಲ್ಲಿದ್ದ ಪ್ರಯಾಣಿಕರ ನಿಖರ ಸಂಖ್ಯೆ ಇನ್ನೂ ತಿಳಿದಿಲ್ಲವಾದರೂ, 40 ಮಂದಿ ಟಿಕೆಟ್‌ಗಳನ್ನು ಹೊಂದಿದ್ದರು. ದೋಣಿಗೆ ಸುರಕ್ಷತಾ ಪ್ರಮಾಣ ಪತ್ರವೂ ಇರಲಿಲ್ಲ ಎಂದು ವರದಿಯಾಗಿದೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ಭಾರತೀಯ ಕೋಸ್ಟ್ ಗಾರ್ಡ್ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಇನ್ನೂ ನಾಪತ್ತೆಯಾದವರನ್ನು ಪತ್ತೆ ಹಚ್ಚಲು ನೀರೊಳಗಿನ ಕ್ಯಾಮೆರಾಗಳನ್ನು ಬಳಸಲಾಗುತ್ತಿದೆ.