ನವದೆಹಲಿ : ದೇಶ ಒಡೆಯುವ ಕೂಗೆಬ್ಬಿಸಿರುವ ಸಂಸದ ಡಿ.ಕೆ. ಸುರೇಶ್ ಅವರನ್ನು ಮೊದಲು ಕಾಂಗ್ರೆಸ್ ವಜಾಗೊಳಿಸಬೇಕು.ಡಿ.ಕೆ. ಸುರೇಶ್ ಅವರ ದೇಶ ವಿಭಜನೆ ಹೇಳಿಕೆ ಸಂಬಂಧ ಕಾನೂನಾತ್ಮಕ ಕ್ರಮ ಜರುಗಿಸಬೇಕು ಎಂದು ಕೇಂದ್ರ ಸಂಸದೀಯ ಸಚಿವ ಜೋಶಿ ಒತ್ತಾಯಿಸಿದ್ದಾರೆ.
ಸಂಸದ ಸುರೇಶ್ ಪ್ರತ್ಯೇಕ ರಾಷ್ಟ್ರದ ಹೇಳಿಕೆ ನೀಡಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಸಚಿವ ಜೋಶಿ ಅವರು, ಕಾಂಗ್ರೆಸ್ ಪಕ್ಷಕ್ಕೆ ನೈತಿಕತೆ ಇದ್ದರೆ ಮೊದಲು ಅವರನ್ನು ಪಕ್ಷದಿಂದ ಹೊರ ಹಾಕಲಿ ಎಂದು ಆಗ್ರಹಿಸಿದ್ದಾರೆ.
ಇವರದ್ದು ದೇಶ ದ್ರೋಹದ ಮನಸ್ಥಿತಿ. ಭಾರತ ಜನನಿಯ ತನುಜಾತೆ ಜಯಹೇ ಕರ್ನಾಟಕ ಮಾತೆ ಎಂದು ಬಣ್ಣಿಸಿದ ಕವಿ ಕುವೆಂಪುಗೆ ಮಾಡಿದ ಅವಮಾನವಾಗಿದೆ. ಕಾಂಗ್ರೆಸ್ ವಿರೋಧ ಪಕ್ಷದಲ್ಲಿ ಕುಳಿತು ದೇಶ ಒಡೆಯುವ ಹುನ್ನಾರ ಮಾಡುತ್ತಿದೆ. ಕಾಂಗ್ರೆಸ್ ಪಕ್ಷಕ್ಕೆ ನಿಜಕ್ಕೂ ನೈತಿಕತೆ ಇದ್ದರೆ ಮೊದಲು ಅವರನ್ನು ಪಕ್ಷದಿಂದ ವಜಾಗೊಳಿಸಲಿ ಎಂದು ಹೇಳಿದರು.