ತಮಿಳುನಾಡಿನಲ್ಲಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಸ್ಫೋಟ: ಆರು ಮಂದಿಗೆ ಗಾಯ, ಎರಡು ಅಂಗಡಿಗಳು ಸುಟ್ಟು ಭಸ್ಮ

ತಿರುನೆಲ್ವೇಲಿ: ತಮಿಳುನಾಡಿನ ತಿರುನೆಲ್ವೇಲಿಯ ಸಮೋಸಾ ಅಂಗಡಿಯಲ್ಲಿ ಎಲ್ಪಿಜಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಕನಿಷ್ಠ ಆರು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಿರುನೆಲ್ವೇಲಿಯ ಉತ್ತರ ರಾಧಾ ರಸ್ತೆಯಲ್ಲಿರುವ ಸಮೋಸಾ ಅಂಗಡಿಯಲ್ಲಿ ಗುರುವಾರ ಸಂಜೆ ಈ ಘಟನೆ ನಡೆದಿದೆ.

ಎರಡು ಅಂಗಡಿಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ. ಸೋಷಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡ ವೀಡಿಯೊದಲ್ಲಿ, ದೊಡ್ಡ ಗ್ಯಾಸ್ ಸಿಲಿಂಡರ್ ಸ್ಫೋಟದ ಶಬ್ದವನ್ನು ಕೇಳಬಹುದು.

ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ಅಗ್ನಿಶಾಮಕ ಸೇವಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದಕ್ಕೂ ಮುನ್ನ ಮೇ 11 ರಂದು ವಿರುಧುನಗರ ಜಿಲ್ಲೆಯ ಶಿವಕಾಶಿ ಬಳಿಯ ನಾರಾಯಣಪುರಂ ಪುದೂರಿನ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತಲುಪಿ ಬೆಂಕಿಯನ್ನು ನಂದಿಸಿದವು

Latest Indian news

Popular Stories