ಮಣಿಪುರ ಹಿಂಸಾಚಾರ: ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಆರಂಭ, ಎಸ್‌ಐಟಿ ಸ್ಥಾಪಿಸಲು ರಾಜ್ಯ ಪ್ರಸ್ತಾಪ

ನವದೆಹಲಿ: ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಆರಂಭವಾಗಿದೆ. ಇನ್ನು ಪ್ರಕರಣಗಳ ತನಿಖೆಗಾಗಿ ಜಿಲ್ಲಾ ಎಸ್‌ಪಿಗಳ ನೇತೃತ್ವದಲ್ಲಿ ಎಸ್‌ಐಟಿ ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಮಣಿಪುರ ಡಿಜಿಪಿ ರಾಜೀವ್ ಸಿಂಗ್ ಅವರು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠದ ಮುಂದೆ ಹಾಜರಾಗಿ ಜನಾಂಗೀಯ ಹಿಂಸಾಚಾರ ಮತ್ತು ಆಡಳಿತವು ಇಲ್ಲಿಯವರೆಗೆ ತೆಗೆದುಕೊಂಡ ಕ್ರಮಗಳ ಬಗ್ಗೆ ಪ್ರಶ್ನೆಗಳಿಗೆ ಉತ್ತರಿಸಿದರು. ಈ ವೇಳೆ ಅವರು ಪರಿಣಾಮಕಾರಿ ತನಿಖೆಯ ಉದ್ದೇಶಗಳಿಗಾಗಿ ಪ್ರಕರಣಗಳನ್ನು ಪ್ರತ್ಯೇಕಿಸುವುದರ ಜೊತೆಗೆ ಎಸ್ಐಟಿ ಸ್ಥಾಪಿಸುವುದಾಗಿ ಹೇಳಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದ ಪರವಾಗಿ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಮತ್ತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಆಗಸ್ಟ್ 1ರಂದು ಪ್ರಕರಣಗಳ ಪ್ರತ್ಯೇಕತೆ ಸೇರಿದಂತೆ ವಿಷಯಗಳ ಕುರಿತು ಸುಪ್ರೀಂ ಕೋರ್ಟ್ ಕೋರಿದ ವರದಿಯನ್ನು ಸಲ್ಲಿಸಿದರು. ಸರ್ಕಾರವು ಅತ್ಯಂತ ಪ್ರಬುದ್ಧ ಮಟ್ಟದಲ್ಲಿ ಪರಿಸ್ಥಿತಿಯನ್ನು ನಿಭಾಯಿಸುತ್ತಿದೆ ಎಂದು ಅಟಾರ್ನಿ ಜನರಲ್ ಅವರು ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠಕ್ಕೆ ತಿಳಿಸಿದರು.

ಸೂಕ್ಷ್ಮ ಪ್ರಕರಣಗಳ ತನಿಖೆಗೆ ಜಿಲ್ಲಾ ಮಟ್ಟದಲ್ಲಿ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಎಸ್‌ಐಟಿಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರವು ಪ್ರಸ್ತಾಪಿಸಿದೆ. ಜೊತೆಗೆ 11 ಪ್ರಕರಣಗಳನ್ನು ಸಿಬಿಐ ತನಿಖೆ ನಡೆಸಲಿದೆ ಎಂದು ಅವರು ಹೇಳಿದರು.

ಆಗಸ್ಟ್ 1ರಿಂದ ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸಾಂವಿಧಾನಿಕ ಯಂತ್ರಗಳ ಸಂಪೂರ್ಣ ಸ್ಥಗಿತವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಜನಾಂಗೀಯ ಹಿಂಸಾಚಾರದ ಘಟನೆಗಳ, ವಿಶೇಷವಾಗಿ ಮಹಿಳೆಯರನ್ನು ಗುರಿಯಾಗಿಸುವ ಘಟನೆಗಳ ‘ತಡ’ ಮತ್ತು ‘ಆಲಸ್ಯ’ ತನಿಖೆಗಾಗಿ ಅದು ರಾಜ್ಯ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿತು. ಆಗಸ್ಟ್ 7ರಂದು ಅದರ ಪ್ರಶ್ನೆಗಳಿಗೆ ಉತ್ತರಿಸಲು ಡಿಜಿಪಿಗೆ ಸಮನ್ಸ್ ನೀಡಿತ್ತು.

Latest Indian news

Popular Stories