ಭಾರತಕ್ಕೆ ಬೆಳ್ಳಿ ಪದಕ ತಂದುಕೊಟ್ಟ ಮೀರಾಬಾಯಿ

ನವದೆಹಲಿ : ಟೋಕಿಯೊ ಒಲಂಪಿಕ್ಸ್ ನಲ್ಲಿ ಮೀರಾಬಾಯಿ ಚಾನು ಅವರು ಬೆಳ್ಳಿ ಪಕದ ಪಡೆಯುವುದರೊಂದಿಗೆ ಬಾರತದ ಪದಕ ಬೇಟೆ ಶುರುವಾಗಿದೆ. 40 ಕೆಜಿ ವೆಟ್ ಲಿಫ್ಟಿಂಗ್ ನಲ್ಲಿ ಮೀರಾಬಾಯಿ ಬೆಳ್ಳಿ ಪದಕ ಪಡೆದಿದ್ದಾರೆ.
ಮೀರಾಬಾಯಿ ಚಾನು ಐಸಿಹಾಸಿಕ ಗೆಲುವು ದಾಖಲಿಸಿದ್ದಾರೆ. ಒಲಿಂಪಿಕ್ಸ್ ವೇಯ್ಟ್ ಲಿಫ್ಟಿಂಗ್ ವಿಭಾಗದಲ್ಲಿ ಭಾರತಕ್ಕೆ ಇದು 2ನೇ ಪದಕವಾಗಿದೆ. ಕರ್ಣಂ ಮಲ್ಲೇಶ್ವರಿ ಬಳಿಕ ವೇಯ್ಟ್ ಲಿಫ್ಟಿಂಗ್‌ನಲ್ಲಿ ಪದಕ ಪಡೆದ 2ನೇ ಮಹಿಳಾ ಎಂಬ ಹೆಗ್ಗಳಿಕೆಗೆ ಮೀರಾಬಾಯಿ ಚಾನು ಪಾತ್ರರಾಗಿದ್ದಾರೆ.
49 ಕೆ ಜಿ ವಿಭಾಗದ ಭಾರ ಎತ್ತುವ ಸ್ಪರ್ಧೆಯಲ್ಲಿ ನಾಲ್ಕು ಸುತ್ತಿನ ಪ್ರಯತ್ನಗಳಲ್ಲಿ ಚಾನು ಒಟ್ಟು 202 ಕೆಜಿ ಎತ್ತಿದ್ದಾರೆ. ಚೀನಾದ ಝಿಹೈ ಹು ಒಟ್ಟು 210 ಕೆಜಿ ತೂಕ ಎತ್ತಿ ಚಿನ್ನದ ಪದಕ ಗಳಿಸಿ ಹೊಸ ಒಲಿಂಪಿಕ್ ದಾಖಲೆಯನ್ನು ಸೃಷ್ಟಿಸಿದರೆ, ಇಂಡೋನೇಷ್ಯಾದ ವಿಂಡಿ ಕ್ಯಾಂಟಿಕಾ ಐಸಾ ಒಟ್ಟು 194 ಕೆಜಿ ತೂಕದೊಂದಿಗೆ ಕಂಚು ಪದಕ ಗಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಮೀರಾಬಾಯಿ ಅವರನ್ನು ಅಭಿನಂದಿಸಿದ್ದಾರೆ. ದೇಶ ಹೆಮ್ಮೆಪಡುವಂತಹ ಸಾಧನೆಯನ್ನು ಮೀರಾಬಾಯಿ ಮಾಡಿದ್ದಾರೆ ಎಂದು ಪ್ರಧಾನಿ ಬಣ್ಣಿಸಿದ್ದಾರೆ.
ಒಲಿಂಪಿಕ್ಸ್ನ ಆರಂಭಿಕ ಆಟಗಳಲ್ಲಿ ಪುರುಷರ 10 ಮೀಟರ್ ಏರ್ ಪಿಸ್ತೋಲ್ ಸ್ಪರ್ಧೆಯಲ್ಲಿ ಭಾರತದ ಸೌರಭ್ ಚೌಧರಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಕ್ವಾಲಿಫಿಕೇಶನ್ ರೌಂಡ್‌ನಲ್ಲಿ ಮೊದಲಿಗರಾಗಿ ಆಟ ಮುಗಿಸಿದ ಚೌಧರಿ, ಪದಕಗಳಿಗಾಗಿ ಸೆಣಸುವ ಫೈನಲ್ಸ್ ಸ್ಪರ್ಧೆಗೆ ಬಡ್ತಿ ಪಡೆದಿದ್ದಾರೆ.
ಭಾರತದ ಆರ್ಚರ್‌ಗಳಾದ ದೀಪಿಕಾ ಕುಮಾರಿ ಮತ್ತು ಪ್ರವೀಣ್ ಜಾಧವ್ ಅವರ ಜೋಡಿ, ಚೀನಾದ ತಂಡವನ್ನು 5-3 ಅಂಕಗಳಿAದ ಸೋಲಿಸಿ, ಮಿಕ್ಸಡ್ ಈವೆಂಟ್‌ನಲ್ಲಿ ಕ್ವಾರ್ಟರ್ ಫೈನಲ್ಸ್ ತಲುಪಿದೆ. ಕ್ವಾರ್ಟರ್ಸ್ನಲ್ಲಿ ದಕ್ಷಿಣ ಕೊರಿಯಾದ ಜೋಡಿಯ ವಿರುದ್ಧ ಸೆಣೆಸಲಿದ್ದಾರೆ.

Latest Indian news

Popular Stories

error: Content is protected !!