ಕಲಬುರ್ಗಿ: ಕಲ್ಯಾಣ ಕರ್ನಾಟಕ ಭಾಗದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿಯನ್ನು ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದಾರೆ. ಅದೇ ಬರೋಬ್ಬರಿ 30,000 ಹುದ್ದೆ ಭರ್ತಿ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.
ನಗರಾಭಿವೃದ್ದಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು.
ಕಲ್ಯಾಣ ಕರ್ನಾಟಕ ಭಾಗದ ಜನರ ಬಹು ನಿರೀಕ್ಷೆಯಂತೆ ಸಿಎಂ ಸಿದ್ದರಾಮಯ್ಯ ನವರ ನೇತೃತ್ವದಲ್ಲಿ ಕಲಬುರಗಿ ಯಲ್ಲಿ ಸೆಪ್ಟೆಂಬರ್ 17 ರಂದು ಸಚಿವ ಸಂಪುಟ ಸಭೆ ನಡೆಸಲಾಗುತ್ತಿದೆ. ಈ ಭಾಗದ ಇಲಾಖಾವಾರು ಸಮಗ್ರ ಅಭಿವೃದ್ದಿಯ ಕುರಿತು ಚರ್ಚಿಸಿ ನೀಲಿ ನಕ್ಷೆ ತಯಾರಿಸುವ ಬಗ್ಗೆಯೂ ಕೂಡಾ ನಿರ್ಧರಿಸಲಾಗುವುದು ಎಂದು ಅವರು ಹೇಳಿದರು.
30,000 ಹುದ್ದೆ ಭರ್ತಿ
2013-18 ರ ಅವಧಿಯಲ್ಲಿ ಕಕ ಭಾಗದ13,000 ಶಿಕ್ಷಕರು ಸೇರಿದಂತೆ 30,000 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಮುಂದಿನ ಒಂದು ವರ್ಷದ ಅವಧಿಯಲ್ಲಿ 6500 ಶಿಕ್ಷಕರು ಸೇರಿದಂತೆ 15000 ಖಾಲಿ ಹುದ್ದೆ ತುಂಬಲಾಗುವುದು ನಂತರ ಎರಡು ವರ್ಷದ ಅವಧಿಯಲ್ಲಿ 25,000 ಹುದ್ದೆ ತುಂಬಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಹೇಳಿದರು.
ನಮ್ಮ ಸರ್ಕಾರದ ಅವಧಿ ಮುಗಿಯುವದರೊಳಗೆ 50,000 ಖಾಲಿಹುದ್ದೆ ತುಂಬುವುದಾಗಿ ಹಾಗೂ ವಾರ್ಷಿಕ 5000 ಕೋಟಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಹಿರಿಯ ನಾಯಕರಾದ ಖರ್ಗೆ ಹಾಗೂ ಸಿಎಂ ಭರವಸೆ ನೀಡಿದ್ರು ಅದಕ್ಕೆ ಬದ್ಧವಾಗಿದ್ದೇವೆ ಎಂದರು.