ಮಧ್ಯಪ್ರದೇಶ: ತಲೆಗೆ 14 ಲಕ್ಷ ರೂ. ಬಹುಮಾನ ಹೊತ್ತಿದ್ದ ಮಾವೋವಾದಿಯ ಎನ್‌ಕೌಂಟರ್‌

ಬಾಲಘಾಟ್: ಮಧ್ಯ ಪ್ರದೇಶದ ಬಾಲಘಾಟ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ನಡೆದ ಎನ್‌ಕೌಂಟರ್‌ನಲ್ಲಿ ತಲೆಗೆ 14 ಲಕ್ಷ ರೂ. ಬಹುಮಾನ ಹೊತ್ತಿದ್ದ 25 ವರ್ಷದ ಮಾವೋವಾದಿಯನ್ನು ಹತ್ಯೆ ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹತ್ಯೆಯಾದ ಮಾವೋವಾದಿಯನ್ನು ಕಮ್ಲು ಎಂದು ಗುರುತಿಸಲಾಗಿದ್ದು, ನಿಷೇಧಿತ ಸಂಘಟನೆಯ ಮಾವೋವಾದಿ ದಲಂ ತಾಂಡಾ ದಡೆಕಾಸ ಘಟಕದ ಸಕ್ರಿಯ ಸದಸ್ಯನಾಗಿದ್ದ ಎಂದು ಅವರು ಹೇಳಿದ್ದಾರೆ.

ರಾಜ್ಯ ಪೊಲೀಸರ ಎಲೈಟ್ ಹಾಕ್ ಫೋರ್ಸ್, ರೂಪ್‌ಜರ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಡಲ್-ಕೊಡ್ಡಾಪರ್ ಮತ್ತು ಸೌಂಗುಡಾ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ ಎನ್‌ಕೌಂಟರ್ ನಡೆದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಕಮ್ಲು ತಲೆಗೆ 14 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು.

ಘಟನೆಯನ್ನು ಖಚಿತಪಡಿಸಿರುವ ಬಾಲಘಾಟ್ ಪೊಲೀಸ್ ವರಿಷ್ಠಾಧಿಕಾರಿ ಸಮೀರ್ ಸೌರಭ್, ಎನ್‌ಕೌಂಟರ್‌ನಲ್ಲಿ ಇನ್ನೂ ಕೆಲವು ಮಾವೋವಾದಿಗಳು ಗಾಯಗೊಂಡಿದ್ದು, ಅವರ ಪತ್ತೆಗೆ ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ ಎಂದು ಹೇಳಿದ್ದಾರೆ.

Latest Indian news

Popular Stories