ಫೆ.17,18 ರಂದು ರಾಷ್ಟ್ರೀಯ ಬಿಜೆಪಿ ಕಾರ್ಯಕಾರಿಣಿ ಸಭೆ ನಿಗದಿ

ನವದೆಹಲಿ : ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಫೆಬ್ರವರಿ 17,18 ರಂದು ರಾಷ್ಟ್ರೀಯ ಬಿಜೆಪಿ ಕಾರ್ಯಕಾರಿಣಿ ಸಭೆ ನಿಗದಿಯಾಗಿದೆ.

ದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ಎಲ್ಲಾ ರಾಜ್ಯಗಳ ಬಿಜೆಪಿ ಸಂಸದರು, ಶಾಸಕರು ಭಾಗಿಯಾಗಲಿದ್ದಾರೆ. ಸಭೆಯ ಮೊದಲ ದಿನ ಎಲ್ಲರನ್ನುದ್ದೇಶಿಸಿ ಜೆಪಿ ನಡ್ಡಾ ಭಾಷಣ ಮಾಡಲಿದ್ದು, ಕೊನೆಯ ದಿನ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ.

ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಬಳಿಕ ಲೋಕಸಭಾ ಚುನಾವಣೆಗೆ ಪಕ್ಷ ಹೊಸ ಕಾರ್ಯತಂತ್ರ ರೂಪಿಸಲಿದೆ ಎಂದು ಹೇಳಲಾಗಿದೆ.ಫೆಬ್ರವರಿ 17 ಮತ್ತು 18 ರಂದು ನವದೆಹಲಿಯಲ್ಲಿ ನಡೆಯಲಿರುವ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಮೆಗಾ ರಾಷ್ಟ್ರೀಯ ಮಂಡಳಿ ಸಭೆಗೆ ಸಜ್ಜಾಗಿದ್ದು, ಜಮ್ಮು ಮತ್ತು ಕಾಶ್ಮೀರದಿಂದ 200 ರಿಂದ 300 ಪಕ್ಷದ ಮುಖಂಡರು ಮತ್ತು ಉನ್ನತ ಕಾರ್ಯಕರ್ತರನ್ನು ಸೆಳೆಯಲಿದೆ.

Latest Indian news

Popular Stories