ಕೆಂಪು ಸಮುದ್ರದ ಬಿಕ್ಕಟ್ಟಿನಿಂದ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ ಎಂದು ವಿಶ್ವ ಆರ್ಥಿಕ ಸಂಸ್ಥೆ ಮುಖ್ಯಸ್ಥ ಬ್ರೊಗ್ ಬ್ರೆಂಡೆ ಎಚ್ಚರಿಕೆ ನೀಡಿದ್ದಾರೆ.
ಯೆಮೆನ್ ಹೌಥಿ ಬಂಡುಕೋರರು ವ್ಯಾಪಾರಿ ಹಡಗುಗಳನ್ನು ಗುರಿಯಾಗಿಸಿ ದಾಳಿ ಮಾಡುತ್ತಿರುವುದರಿಂದ ಕೆಂಪು ಸಮುದ್ರದಲ್ಲಿ ಬಿಕ್ಕಟ್ಟು ಉಂಟಾಗಿದೆ.ಇದರಿಂದ ತೈಲ ಪೂರೈಕೆಯ ಸರಪಳಿಯ ಕೊಂಡಿ ಕಳಚಲಿದ್ದು, ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಇಂಧನದ ಬೆಲೆ ಪ್ರತಿ ಬ್ಯಾರಲ್ ಗೆ 10ರಿಂದ 20 ಡಾಲರ್ ಏರಿಕೆಯಾಗುವ ಸಾಧ್ಯತೆ ಇದೆ.
ಭಾರತ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಲಿದ್ದು, ಭಾರತದ ಆರ್ಥಿಕ ಅಭಿವೃದ್ಧಿಯ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಬ್ರೊಗ್ ಬ್ರೆಂಡೆ ವಿವರಿಸಿದ್ದಾರೆ.