ಲೋಕಸಭೆ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿಯವರ ಭಾವಚಿತ್ರಕ್ಕೆ ಚಪ್ಪಲಿ ಮುದ್ರೆ ಇಟ್ಟ ಚಿತ್ರವನ್ನು ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಹಂಚಿಕೊಂಡ ಬೆಂಗಳೂರಿನ ಮಹಿಳೆಯೊಬ್ಬರ ವಿರುದ್ಧ ದೂರು ಸಲ್ಲಿಸಲಾಗಿದೆ
ಬೆಂಗಳೂರಿನ ಹೋಂ ಟೌನ್ ನಿವಾಸಿ ನಂದಿನಿ ಭಂಡಾರ್ಕರ್ ವಿರುದ್ಧ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಆರ್.ಎಚ್. ನಾಯಕ ಮಂಗಳವಾರದಂದು ದೂರು ನೀಡಿ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ.
ನಂದಿನಿ ಭಂಡಾರ್ಕರ್ ಅವರು ಫೇಸ್ಬುಕ್ ನಲ್ಲಿ ರಾಹುಲ್ ಗಾಂಧಿಯವರ ಈ ಫೋಟೋವನ್ನು ಹಂಚಿಕೊಳ್ಳುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರ ಭಾವನೆಯನ್ನು ಘಾಸಿಗೊಳಿಸಿದ್ದಾರೆ. ಅಲ್ಲದೆ ಕೋಮು ಸೌಹಾರ್ದಕ್ಕೆ ಧಕ್ಕೆ ಮಾಡುವ ಉದ್ದೇಶ ಹೊಂದಿದ್ದಾರೆ ಎಂದು ತಮ್ಮ ದೂರಿನಲ್ಲಿ ತಿಳಿಸಿರುವ ಆರ್.ಎಚ್. ನಾಯ್ಕ, ನಂದಿನಿಯವರ ವಿರುದ್ಧ ತಕ್ಷಣ ಎಫ್‌ಐಆರ್ ದಾಖಲಿಸಿ ಬಂಧಿಸಬೇಕು ಎಂದು ಮನವಿ ಮಾಡಿದ್ದಾರೆ.