ನವದೆಹಲಿ: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜ್ಯಸಭಾ ಚುನಾವಣೆಗೆ ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಾಮಪತ್ರ ಸಲ್ಲಿಸಲು ಸೋನಿಯಾ ಗಾಂಧಿ ಇಂದು ಬೆಳಿಗ್ಗೆ ಜೈಪುರಕ್ಕೆ ತಲುಪುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.
1998 ಮತ್ತು 2022 ರ ನಡುವೆ ಸುಮಾರು 22 ವರ್ಷಗಳ ಕಾಲ ಕಾಂಗ್ರೆಸ್ ಅಧ್ಯಕ್ಷೆಯಾಗಿದ್ದ ಸೋನಿಯಾ ಗಾಂಧಿ ಐದು ಬಾರಿ ಲೋಕಸಭಾ ಸಂಸದರಾಗಿದ್ದಾರೆ. ರಾಜ್ಯಸಭಾ ಚುನಾವಣೆಗೆ ಸೋನಿಯಾ ಗಾಂಧಿ ನಾಮಪತ್ರ ಸಲ್ಲಿಸುವಾಗ ರಾಹುಲ್ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ಇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇತರ ಕೆಲವು ರಾಜ್ಯ ಘಟಕಗಳು ಸೋನಿಯಾ ಗಾಂಧಿ ಅವರಿಗೆ ನಾಮಪತ್ರ ಸಲ್ಲಿಸಲು ಆಫರ್ ನೀಡಿದ್ದರೂ, ಆಯ್ಕೆಯ ವಿಷಯದಲ್ಲಿ ರಾಜಸ್ಥಾನವು ಅಗ್ರಸ್ಥಾನದಲ್ಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ರಾಜಸ್ಥಾನದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಈ ವರ್ಷದ ಏಪ್ರಿಲ್ ನಲ್ಲಿ ನಿವೃತ್ತರಾಗಲಿದ್ದಾರೆ.