ಇಂದು ಯೋಗ ದಿನ; ಕಾಶ್ಮೀರದಲ್ಲಿ ಮೋದಿ ಯೋಗಾಸನ, ವಿಶ್ವಾದ್ಯಂತ ಆಚರಣೆ

ನವದೆಹಲಿ: ಇಂದು ಅಂತಾರಾಷ್ಟ್ರೀಯ ಯೋಗ ದಿನ. ಭಾರತ ಸೇರಿ ಜಗತ್ತಿನಾದ್ಯಂತ ಯೋಗ ದಿನ ಆಚರಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀನಗರದ ಶೇರ್-ಎ-ಕಾಶ್ಮೀರ್ ಇಂಟರ್‌ನ್ಯಾಷನಲ್‌ ಕಾನ್ಫರೆನ್ಸ್ ಸೆಂಟರ್ (Sher-e-Kashmir International Conference Centre)ನಲ್ಲಿ ನಡೆಯಲಿರುವ ವಿಶ್ವ ಯೋಗ ದಿನಾಚರಣೆ (World Yoga Day) ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಇನ್ನೇನು ಕೆಲವೇ ಕ್ಷಣಗಳಲ್ಲಿ ಯೋಗ ದಿನದ ಕಾರ್ಯಕ್ರಮ ಆರಂಭವಾಗಲಿದೆ. ಭಾರತ ಮಾತ್ರವಲ್ಲ ಜಗತ್ತಿನಾದ್ಯಂತ (International Yoga Day 2024) ಯೋಗ ದಿನವನ್ನು ಆಚರಣೆ ಮಾಡಲಾಗುತ್ತಿದೆ. ಬೆಳಗ್ಗೆ 6.30ಕ್ಕೆ ನರೇಂದ್ರ ಮೋದಿ ಅವರು ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಾದ ಬಳಿಕ ಅವರು ಭಾಷಣ ಮಾಡಲಿದ್ದಾರೆ.

ಸತತ ಮೂರನೇ ಬಾರಿಗೆ ಕೇಂದ್ರ ಸಚಿವರಾದ ನಂತರ ಜಮ್ಮು ರಾಜಧಾನಿ ಶ್ರೀನಗರಕ್ಕೆ ಆಗಮಿಸಿದ ಬಿಜೆಪಿ ಮುಖಂಡ ಜಿತೇಂದ್ರ ಸಿಂಗ್, ಜೂನ್ 21ರಂದು ಶ್ರೀನಗರದಲ್ಲಿ ನಡೆಯಲಿರುವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಭಾಗವಹಿಸಲಿದ್ದಾರೆ. ಇವರ ಜತೆ ಸುಮಾರು 9,000 ಮಂದಿ ಯೋಗ ಪ್ರದರ್ಶನ ನೀಡಲಿದ್ದಾರೆ ಮೂಲಗಳು ತಿಳಿಸಿವೆ.

ಭಾರತ ಸೇರಿದಂತೆ ಜಗತ್ತಿನಾದ್ಯಂತ 175ಕ್ಕೂ ಅಧಿಕ ರಾಷ್ಟ್ರಗಳು ಯೋಗ ದಿನವನ್ನು ಆಚರಿಸುತ್ತವೆ. ಅದರಲ್ಲೂ, ಅಮೆರಿಕ, ಬ್ರಿಟನ್‌, ಯುಎಇ, ಬಾಂಗ್ಲಾದೇಶ, ಶ್ರೀಲಂಕಾ, ನೇಪಾಳ, ಜಪಾನ್‌, ನ್ಯೂಜಿಲ್ಯಾಂಡ್‌, ಆಸ್ಟ್ರೇಲಿಯಾ ಸೇರಿ ಜಗತ್ತಿನಾದ್ಯಂತ ಯೋಗ ದಿನವನ್ನು ಆಚರಿಸಲಾಗುತ್ತದೆ. ಬೇರೆ ದೇಶಗಳಲ್ಲಿರುವ ಭಾರತದ ರಾಯಭಾರ ಕಚೇರಿಗಳಲ್ಲೂ ಯೋಗ ಸೆಷನ್‌ಗಳ ಮೂಲಕ ಆಚರಣೆ ಮಾಡಲಾಗುತ್ತದೆ. ಈ ಬಾರಿ ಶಾರ್ಜಾದಲ್ಲಿ ಭಾರತದ ರಾಯಭಾರಿ ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸುಮಾರು 5 ಸಾವಿರ ಜನ ಯೋಗ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

Latest Indian news

Popular Stories