10 ವರ್ಷದ ಬಳಿಕ ನಾಳೆ ಕಲಬುರ್ಗಿಯಲ್ಲಿ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ‘ರಾಜ್ಯ ಸಚಿವ ಸಂಪುಟ ಸಭೆ’

ಕಲಬುರ್ಗಿ: ನಾಳೆ ಕಲ್ಯಾಣ ನಾಡಿನ ಹೆಬ್ಬಾಗಿಲೆಂದೇ ಖ್ಯಾತಿ ಪಡೆದಂತ ಕಲಬುರ್ಗಿಯ ಮಹಾನಗರದ ವಿಕಾಸ ಸೌಧದಲ್ಲಿನ ಪ್ರಾದೇಶಿಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಸಂಜೆ.4 ಗಂಟೆಗೆ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಐತಿಹಾಸಿಕ ಸಚಿವ ಸಂಪುಟ ಸಭೆ ನಡೆಯಲಿದೆ. ಸಿದ್ಧರಾಮಯ್ಯರಿಂದ ನಡೆಸಲಾಗುತ್ತಿರುವಂತ 2ನೇ ಸಂಪುಟ ಸಭೆ ಇದಾಗಿದ್ದರೇ, 10 ವರ್ಷಗಳ ಬಳಿಕ ನಡೆಯುತ್ತಿರುವಂತ ರಾಜ್ಯ ಸಚಿವ ಸಂಪುಟ ಸಭೆ ದಾಗಿದೆ.

ಹೌದು ನಾಳೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಕಲಬುರ್ಗಿಯಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಇದು ಸಿದ್ದರಾಮಯ್ಯ ಸರ್ಕಾರದ 2024ನೇ ಸಾಲಿನ 19ನೇ ಸಂಪುಟ ಸಭೆಯಾಗಿದೆ. ನವೆಂಬರ್.18, 2014ರಲ್ಲಿ ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿದ್ದಂತ ಸಂದರ್ಭದಲ್ಲಿಯೇ ಕಲಬುರ್ಗಿಯಲ್ಲಿ ಮೊದಲ ಸಂಪುಟ ಸಭೆಯನ್ನು ನಡೆಸಿ, ಗಮನ ಸೆಳೆದಿದ್ದರು.

ಈಗ ಒಂದು ದಶಕದ ಬಳಿಕ ಸಿದ್ದರಾಮಯ್ಯ ನೇತೃತ್ವದಲ್ಲಿ 2ನೇ ಸಂಪುಟ ಸಭೆಯು ನಾಳೆ ಕಲಬುರ್ಗಿಯಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಕಲಬುರ್ಗಿ, ಬೀದರ್, ರಾಯಚೂರು, ಯಾದಗಿರಿ, ಬಳ್ಳಾರಿ, ಕೊಪ್ಪಳ ಹಾಗೂ ವಿಜಯನಗರ ವ್ಯಾಪ್ತಿಯ ಕಲ್ಯಾಣ ಕರ್ನಾಟಕ ಭಾಗದ ಜನರ ನಿರೀಕ್ಷೆಗಳಿಗೆ ಸಂಬಂಧಿಸಿದಂತೆ ಮಹತ್ವದ ಚರ್ಚೆ ನಡೆದು, ಹಲವು ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ನೀಡುವ ಸಾಧ್ಯತೆ ಇದೆ.

Latest Indian news

Popular Stories