ಜಂತರ್ ಮಂತರ್ ನಲ್ಲಿ ಯುವ ಕಾಂಗ್ರೆಸ್ ವತಿಯಿಂದ ಮಣಿಪುರ ಹಿಂಸಾಚಾರ ನಿಯಂತ್ರಿಸುವಲ್ಲಿ ಬಿಜೆಪಿ ಸರ್ಕಾರದ ವೈಫಲ್ಯ ವಿರೋಧಿಸಿ ಪ್ರತಿಭಟನೆ!

ನವದೆಹಲಿ: ಮಣಿಪುರದಲ್ಲಿನ ಹಿಂಸಾಚಾರ ಸೇರಿದಂತೆ ದೇಶದಲ್ಲಿನ ಹಲವು ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಭಾರತೀಯ ಯುವ ಕಾಂಗ್ರೆಸ್ ಸದಸ್ಯರು ರಾಷ್ಟ್ರ ರಾಜಧಾನಿಯ ಜಂತರ್ ಮಂತರ್ ನಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿದರು.

‘ಭಾರತ ಉಳಿಸಿ, ಸಂಸತ್ ಘೇರಾವ್’ ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ನ ನೂರಾರು ಕಾರ್ಯಕರ್ತರು ಪಾಲ್ಗೊಂಡರು.ಮಣಿಪುರ ಜನಾಂಗೀಯ  ಹಿಂಸಾಚಾರದಿಂದ ತತ್ತರಿಸಿದ್ದರೂ ಪ್ರಧಾನಿ ನರೇಂದ್ರ ಮೋದಿ ಇಲ್ಲಿಯವರೆಗೂ ಮೌನ ಮುರಿದಿಲ್ಲ. ದೇಶದಲ್ಲಿ ಹಣದುಬ್ಬರ ಹೆಚ್ಚಾಗಿದ್ದು, ಬೆಲೆ ನಿಯಂತ್ರಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ. ನಿರುದ್ಯೋಗ ಪ್ರಮಾಣ ನಿರಂತರವಾಗಿ ಏರಿಕೆಯಾಗುತ್ತಿದ್ದರೂ ಉದ್ಯೋಗ ಸೃಷ್ಟಿಯತ್ತ ಸರ್ಕಾರ ಗಮನ ಹರಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಪ್ರತಿಭಟನಾಕರರನ್ನು ನಿಯಂತ್ರಿಸಲು ಪೊಲೀಸರು ಬ್ಯಾರಿಕೇಡ್ ಹಾಕಿದ್ದರು. ಕೆಲವರು ಆ ಬ್ಯಾರಿಕೇಡ್ ಗಳನ್ನು ಮುರಿಯಲು ಪ್ರಯತ್ನಿಸಿದರು. ಈ ಸಂದರ್ಭದಲ್ಲಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣದ ನಂತರ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. 

Latest Indian news

Popular Stories