ತಮಿಳುನಾಡು : ಬಸ್ ಕಂದಕಕ್ಕೆ ಉರುಳಿ 8 ಮಂದಿ ದುರ್ಮರಣ

ಚೆನೈ :ತಮಿಳುನಾಡಿನ ಮರಪಾಲಂ ಬಳಿ ಬಸ್ ಕಂದಕಕ್ಕೆ ಉರುಳಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದಾರೆ.ಹಾಗೂ 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಕೂನೂರು ಬಳಿಯ ಮರಪಾಲಂ ಎಂಬಲ್ಲಿ 100 ಅಡಿ ಆಳದ ಕಂದಕಕ್ಕೆ ಬಸ್ ಉರುಳಿ ಬಿದ್ದಿದ್ದು ಬಸ್‌ನಲ್ಲಿ 55 ಜನರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Latest Indian news

Popular Stories