ದ.ಕ. ಜಿಲ್ಲೆಯ ದಲಿತ ಚಳವಳಿಯ ಹಿರಿಯ ಮುಖಂಡ ಚಂದು ಎಲ್. ನಿಧನ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ದಲಿತ ಚಳವಳಿಯ ಹಿರಿಯ ಮುಖಂಡ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್. (52) ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ರಾತ್ರಿ ನಿಧನರಾಗಿದ್ದಾರೆ.

ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಿಸದೆ ಕಳೆದ ರಾತ್ರಿ ಕೊನೆಯುಸಿರೆಳೆದಿದ್ದಾರೆ.

ಮೃತರು ಪತ್ನಿ ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಭಿಮಾನಿಗಳನ್ನು ಅಗಲಿದ್ದಾರೆ.

Latest Indian news

Popular Stories