ಹಣೆಗೆ ಕುಂಕುಮ ಹಚ್ಚಿಸಿಕೊಳ್ಳಲು ನಿರಾಕರಣೆ; ಆರ್ ಅಶೋಕ್ ವಿರುದ್ಧ ಕಾಂಗ್ರೆಸ್ ಟೀಕಾಪ್ರಹಾರ!

ಬೆಂಗಳೂರು: ಹಣೆಗೆ ಕುಂಕುಮ ಹಚ್ಚಿಕೊಳ್ಳಲು ವಿಪಕ್ಷ ನಾಯಕ ಆರ್. ಅಶೋಕ್ ನಿರಾಕರಿಸಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಜಿಲ್ಲೆಯ ಚಿಂಚೋಳಿ ತಾಲೂಕಿನ ಸುಲೆಪೇಟ್ ನಲ್ಲಿರುವ ಬಿಜೆಪಿ ಕಚೇರಿಗೆ ಭಾನುವಾರ ಆರ್. ಅಶೋಕ್ ಭೇಟಿ ನೀಡಿದಾಗ ಹಿರಿಯ ಮುಖಂಡರೊಬ್ಬರು ಕುಂಕುಮ ಹಚ್ಚಲು ಮುಂದಾಗಿದ್ದಾರೆ. ಆದರೆ, ಅಶೋಕ್, ಕುಂಕುಮ ಹಚ್ಚದಂತೆ ಬೇಡ ಎನ್ನುವ ಮೂಲಕ ತಡೆದಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ಹರಿದಾಡಿದ್ದು, ವಿಪಕ್ಷ ನಾಯಕನ ನಡೆಗೆ ವಿರೋಧ ವ್ಯಕ್ತವಾಗುತ್ತಿದೆ.

ಈ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ಕರ್ನಾಟಕ ಕಾಂಗ್ರೆಸ್, ವಿಪಕ್ಷ ನಾಯಕ ಅಶೋಕ್ ಗೆ ಕುಂಕುಮ ಎಂದರೆ ಅಲರ್ಜಿಯೇ, ಅಸಹ್ಯವೇ? ಎಂದು ಪ್ರಶ್ನಿಸಿದೆ. ಕುಂಕುಮ ಹಚ್ಚಲು ಬಂದರೆ ಅದನ್ನು ನಿರಾಕರಿಸುವ ಅಶೋಕ್ ಅವರ ಮೂಲಕ ಬಿಜೆಪಿಯವರ ಬೂಟಾಟಿಕೆಯ ಹುಸಿ ಧಾರ್ಮಿಕತೆ ನಾಟಕ ಬಯಲಾಗಿದೆ ಎಂದು ಟೀಕಿಸಿದೆ.

ಕೇಸರಿ ಶಾಲು, ಕುಂಕುಮ ಮುಂತಾದವುಗಳು ಬಿಜೆಪಿಗರ ಯುವ ಸಮುದಾಯವನ್ನು ದಿಕ್ಕು ತಪ್ಪಿಸುವ ಟೂಲ್ ಕಿಟ್ ಹೊರತು ಬಿಜೆಪಿಗರ ಅಸಲಿ ಆಚರಣೆಯಲ್ಲ. ಬೊಮ್ಮಾಯಿಯವರು ಕುಂಕುಮಾವನ್ನು ಉಜ್ಜಿ ಉಜ್ಜಿ ಅಳಿಸಿಕೊಂಡರೆ, ಅಶೋಕ್ ಅವರು ಹಚ್ಚಿಕೊಳ್ಳಲು ನಿರಾಕರಿಸುತ್ತಾರೆ. ನಿಮ್ಮ ನಾಯಕರಿಗೆ ಕುಂಕುಮಕ್ಕಿಂತ ಮೇಕಪ್ ಮುಖ್ಯವೇ ಎಂದು ಪ್ರಶ್ನಿಸಿದೆ.

Latest Indian news

Popular Stories