ನಾಳೆ, ಭಾರತ್ ಸೋಶಿಯಲ್ ಆಂಡ್ ವೆಲ್ಫೇರ್ ಟ್ರಸ್ಟ್ ( BSWT) ವತಿಯಿಂದ 8 ನೇ ವರ್ಷದ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

ಭಾರತ್ ಸೋಶಿಯಲ್ ಆಂಡ್ ವೆಲ್ಫೇರ್ ಟ್ರಸ್ಟ್ (ರಿ) “BSWT” ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗ ಈ ಮೂರು ಕೇಂದ್ರೀಯ ವಿಷಯಗಳಲ್ಲಿ ಕಳೆದ ಎಂಟು ವರ್ಷಗಳಿಂದ ಕರ್ನಾಟಕದಾದ್ಯಂತ ವಿವಿಧ ಸೇವಾ ಕಾರ್ಯಗಳನ್ನು ಮಾಡುತ್ತಾ ಪ್ರತೀ ವರ್ಷ ನೂರೈವತ್ತು ಅರ್ಹ ಬಡಾ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ನೀಡುತ್ತಾ ಬಂದಿದೆ. ಪ್ರಸಕ್ತ ವರ್ಷದ ವಿದ್ಯಾರ್ಥಿ ವೇತನವನ್ನು ಸಹೋದಯ ಸಭಾಂಗಣ ಬಲ್ಮಟ ಮಂಗಳೂರು ಇಲ್ಲಿ ಜನವರಿ 26- 2023 ಗಣರಾಜ್ಯೋತ್ಸವ ದಿನದಂದು ಸಮಯ ಅಪರಾಹ್ನ 3.00 ಗಂಟೆಗೆ ಸರಿಯಾಗಿ ನಡೆಯಲಿದೆ. ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದ ಜೊತೆಗೆ ಚಿತ್ರ ನಟ ಅರವಿಂದ್ ಬೋಳಾರ್ ಅವರಿಗೆ “ವರ್ಷದ ವ್ಯಕ್ತಿ” ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಾರಾಯಣ ಗುರು ಪಿ.ಯು ಕಾಲೇಜಿನ ಪ್ರಾಂಶುಪಾಲೆಯಾದ ಶ್ರೀಮತಿ ರೇಣುಕಾ ಅರುಣ್, ಗೋಕರ್ಣಾಥೇಶ್ವರ ಕಾಲೇಜಿನ ಪ್ರಾಂಶುಪಾಲೆಯಾದ ಶ್ರೀಮತಿ ಡಾ. ಸುಜಯ ಸುವರ್ಣ, ಮಿಲಾಗ್ರೀಸ್ ಪಿ.ಯು ಕಾಲೇಜಿನ ಪ್ರಾಂಶುಪಾಲರಾದ ಮೆಲ್ವಿನ್ ವಾಸ್, BSWT ಇದರ ಅಧ್ಯಕ್ಷರಾದ ಎನ್. ಅಮೀನ್ ಭಾಗವಹಿಸಲಿದ್ದಾರೆ. ಮೊಹಮ್ಮದ್ ಹುಸೇನ್, ಉದ್ಯಮಿ ಅಶ್ರಫ್ ಎಂ.ಸಿಯವರು ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತರಿರರು. ಮಂಗಳ ಗಂಗೋತ್ರಿ ಕೊಣಾಜೆ ಇಲ್ಲಿನ ಸುಪರಿಡೆಂಟ್ ಶ್ರೀ ಹರೀಶ್ ಕುಮಾರ್ ಕುತ್ತಡ್ಕ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿರುವರೆಂದು ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಆಕಿಫ್ ಎಂಜಿನಿಯರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest Indian news

Popular Stories