ಚೀನಾದ ಜಿಯಾಂಗ್ಸು ಪ್ರಾಂತ್ಯದ ರಾಜಧಾನಿ ನಾನ್ಜಿಂಗ್ (ಯುಹುವಾಟೈ ಜಿಲ್ಲೆ) ನ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ. ಇದರೊಂದಿಗೆ 44 ಜನರು ತೀವ್ರವಾಗಿ ಸುಟ್ಟುಹೋಗಿದ್ದಾರೆ.
ಶುಕ್ರವಾರ ಮುಂಜಾನೆ 4:39 ರ ಸುಮಾರಿಗೆ, ಯುಹುತೈ ಜಿಲ್ಲೆಯ ವಸತಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಸ್ಥಳೀಯ ಅಗ್ನಿಶಾಮಕ ಇಲಾಖೆಗೆ ವರದಿ ಬಂದಿದೆ.
ರಕ್ಷಣಾ ಸಿಬ್ಬಂದಿ ಬೆಳಿಗ್ಗೆ 6 ಗಂಟೆ ಸುಮಾರಿಗೆ ಬೆಂಕಿಯನ್ನು ನಂದಿಸಿದರು ಮತ್ತು ಘಟನಾ ಸ್ಥಳದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮಧ್ಯಾಹ್ನ 2 ಗಂಟೆ ಸುಮಾರಿಗೆ ಕೊನೆಗೊಂಡಿತು. ಗಾಯಗೊಂಡ 44 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿದ್ಯುತ್ ಉಪಕರಣಗಳನ್ನು ಇರಿಸಲಾಗಿದ್ದ ಕಟ್ಟಡದ ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ಬೆಂಕಿಯ ಕಾರಣವನ್ನು ಕಂಡುಹಿಡಿಯಲು ತನಿಖಾ ಸಂಸ್ಥೆಗಳು ತನಿಖೆಯನ್ನು ಪ್ರಾರಂಭಿಸಿವೆ.