ತೆಲಂಗಾಣದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸ್ಫೋಟ; ಐವರ ಸಾವು,ಇನ್ನೂ ಹಲವರು ಸಿಲುಕಿರುವ ಶಂಕೆ

ಹೈದ್ರಾಬಾದ್​: ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿರುವ ಕೆಮಿಕಲ್​ ಫ್ಯಾಕ್ಟರಿಯಲ್ಲಿ ರಿಯಾಕ್ಟರ್ ಸ್ಫೋಟಗೊಂಡ ಐವರು ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇನ್ನೂ ಹಲವರು ಫ್ಯಾಕ್ಟರಿ ಒಳಗೆ ಸಿಲುಕಿಕೊಂಡಿದ್ದಾರೆ ಎನ್ನಲಾಗುಯತ್ತಿದೆ.

ಸ್ಫೋಟ ನಡೆದ ಸಂದರ್ಭದಲ್ಲಿ ಕಟ್ಟಡದಲ್ಲಿ 50 ಮಂದಿ ಇದ್ದರು ಎನ್ನಲಾಗುತ್ತಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ.

ಚಂದಾಪುರ ಗ್ರಾಮದ ಹೊರವಲಯದಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ರಿಯಾಕ್ಟರ್ ಸ್ಫೋಟಗೊಂಡು ಸಾವು-ನೋವು ಸಂಭವಿಸಿದೆ. ಮೃತಪಟ್ಟವರಲ್ಲಿ ಒಬ್ಬರು ಕಾರ್ಖಾನೆಯ ಮ್ಯಾನೇಜರ್​ ಎಂದು ಗುರುತಿಸಲಾಗಿದೆ. ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ.

Latest Indian news

Popular Stories