ಬಸ್ ಪಲ್ಟಿ: 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

ಕೊಪ್ಪಳ: ಖಾಸಗಿ ಬಸ್ ಪಲ್ಟಿಯಾಗಿ ಬಿದ್ದು 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ನಡೆದಿದೆ.

ಹೈದರಾಬಾದ್ ನಿಂದ ಬೆಳಗಾವಿಗೆ ತೆರಳುತ್ತಿದ್ದ ಖಾಸಗಿ ಬಸ್ ಗಂಗಾವತಿ ತಾಲೂಕಿನ ಹೇಮಗುಡ್ಡ ಟೋಲ್ ಗೇಟ್ ಬಳಿ ಪಲ್ಟಿಯಾಗಿದೆ.ಬೊಲೆರೊ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಬಸ್, ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ ಬಿದ್ದಿದೆ.

ಘಟನೆಯಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಗಂಗಾವತಿ ಹಾಗೂ ಕೊಪ್ಪಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Latest Indian news

Popular Stories