ಬೃಹತ್ ಉದ್ಯೋಗ ಮೇಳ-2024 ಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ 1 ಲಕ್ಷಕ್ಕೂ ಹೆಚ್ಚು ನಿರುದ್ಯೋಗಿಗಳಿಗೆ, ಉದ್ಯೋಗ ನೀಡಲು ಉದ್ಯೋಗದಾತರು ಮುಂದಾಗಿದ್ದಾರೆ. ಸುಮಾರು 75 ಸಾವಿರಕ್ಕೂ ಹೆಚ್ಚು ಯುವ ಉದ್ಯೋಗ ಆಕಾಂಕ್ಷಿಗಳು ಯುವ ಸಮೃದ್ಧಿ ಬೃಹತ್ ಉದ್ಯೋಗ ಮೇಳ-2024 ಕ್ಕೆ ಆನ್‍ಲೈನ್‍ನಲ್ಲಿ ನೊಂದಾಯಿಸಿಕೊಂಡಿದ್ದಾರೆ.ಈ ಸಮ್ಮೇಳನದಲ್ಲಿ ಸುಮಾರು 600 ಕ್ಕೂ ಹೆಚ್ಚು ಉದ್ಯೋಗದಾತರು ಭಾಗವಹಿಸಿದ್ದಾರೆ.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ (ಕೆ.ಎಸ್.ಡಿ.ಸಿ) ವತಿಯಿಂದ ಇಂದು ಅರಮನೆ ಮೈದಾನ, ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಯುವ ಸಮೃದ್ಧಿ ಸಮ್ಮೇಳನ ಬೃಹತ್ ಉದ್ಯೋಗ ಮೇಳ-2024ರ ಉದ್ಘಾಟನೆ ಹಾಗೂ ಯುವ ಸಮೃದ್ಧಿ ಸಮ್ಮೇಳನ ಬೃಹತ್ ಉದ್ಯೋಗ ಮೇಳದ ಲಾಂಛನ ಲೋಕಾರ್ಪಣೆ ಮಾಡಿ ಮಾತನಾಡಿದರು.

ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಫೆಬ್ರವರಿ 26 ಮತ್ತು 27 ರಂದು ಆಯೋಜಿಸಿದೆ. ನಿರುದ್ಯೋಗ ಒಂದು ದೊಡ್ಡ ಸಮಸ್ಯೆಯಾಗಿದ್ದು, ಪ್ರತಿ ವರ್ಷ ನಿರುದ್ಯೋಗ ಸಮಸ್ಯೆ ಹೆಚ್ಚುತ್ತಲೇ ಇದೆ. 2014-15 ರಲ್ಲಿ ಶೇ.2.1 ರಷ್ಟಿದ್ದ ನಿರುದ್ಯೋಗ ಸಮಸ್ಯೆ ಇಂದು ಶೇ. 8.40ರಷ್ಟು ಹೆಚ್ಚಾಗಿದ್ದು, ಬೃಹದಾಕಾರದ ಸಮಸ್ಯೆ ಹೆಚ್ಚಾಗುತ್ತಿದೆ. ಸರ್ಕಾರ ಇಂದು ಉದ್ಯೋಗ ಸೃಷ್ಟಿ ಮಾಡಿ, ಉದ್ಯೋಗ ಕೊಡದೆ ಇದ್ದರೆ, ಯುವಜನತೆ ಈ ದೇಶದಲ್ಲಿ ನಿರುದ್ಯೋಗಿಗಳಾಗುತ್ತಾರೆ ಎಂದರು.

Latest Indian news

Popular Stories