ಸ್ಥಗಿತಗೊಂಡಿದ್ದ 5, 8, 9, ಮತ್ತು 11ನೇ ತರಗತಿ ‘ಬೋರ್ಡ್ ಪರೀಕ್ಷೆ’ ಮುಂದುವರೆಸಿ- ಹೈಕೋರ್ಟ್ ಆದೇಶ

ಬೆಂಗಳೂರು: ರಾಜ್ಯ ಶಾಲಾ ಶಿಕ್ಷಣ ಇಲಾಖೆ ನಿಗದಿ ಪಡಿಸಿದ್ದಂತ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಹೈಕೋರ್ಟ್ ಬಳಿಕ, ಸುಪ್ರೀಂ ಕೋರ್ಟ್ ರದ್ದುಪಡಿಸಿತ್ತು. ಆದ್ರೇ ಹೈಕೋರ್ಟ್ ಗೆ ಬೋರ್ಡ್ ಪರೀಕ್ಷೆಗೆ ಅನುಮತಿ ಕೋರಿ ಪೋಷಕರು ಸಲ್ಲಿಸಿದ್ದಂತ ವಿಚಾರಣೆಯನ್ನು ಹೈಕೋರ್ಟ್ ನಡೆಸಿತ್ತು.
ಈ ಬಳಿಕ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಇಂತಹ ತೀರ್ಪನ್ನು ಇಂದು ಪ್ರಕಟಿಸಿದ್ದು, ಸ್ಥಗಿತಗೊಂಡಿರುವಂತ ಪರೀಕ್ಷೆಗಳನ್ನು ಮುಂದುವರೆಸಲು ಹೈಕೋರ್ಟ್ ಸೂಚಿಸಿದೆ.

ಶಾಲಾ ಶಿಕ್ಷಣ ಇಲಾಖೆ ನಿಗದಿ ಪಡಿಸಿದ್ದಂತ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ಕೋರಿ ಖಾಸಗಿ ಶಾಲೆಗಳ ಸಂಘದಿಂದ ಹೈಕೋರ್ಟ್ ಮೆಟ್ಟಿಲೇರಲಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ್ದಂತ ಏಕ ಸದಸ್ಯ ನ್ಯಾಯಪೀಠವು ಬೋರ್ಡ್ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶಿಸಿತ್ತು.

ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ವಿಭಾಗಿಯ ನ್ಯಾಯಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದಂತ ಹೈಕೋರ್ಟ್, 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸೋದಕ್ಕೆ ಗ್ರೀನ್ ಸಿಗ್ನಲ್ ನೀಡಿತ್ತು.
ಆದ್ರೇ ಹೈಕೋರ್ಟ್ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ಖಾಸಗಿ ಶಾಲೆಗಳ ಸಂಘದಿಂದ ಸುಪ್ರೀಂ ಕೋರ್ಟ್ ಮೊರೆ ಹೋಗಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ್ದಂತ ಸುಪ್ರೀಂ ಕೋರ್ಟ್ ನ್ಯಾಯಪೀಠವು ಬಾಕಿ ಇರುವಂತ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಗೆ ತಡೆಯಾಜ್ಞೆ ನೀಡಿ ಆದೇಶಿಸಿತ್ತು. ಹೀಗಾಗಿ ಶಾಲಾ ಶಿಕ್ಷಣ ಇಲಾಖೆಯಿಂದ ಬೋರ್ಡ್ ಪರೀಕ್ಷೆಯನ್ನು ಮುಂದೂಡಿ ಆದೇಶ ಕೂಡ ಮಾಡಲಾಗಿತ್ತು.

ಈ ಬೆನ್ನಲ್ಲೇ ಬೋರ್ಡ್ ಪರೀಕ್ಷೆಗೆ ಅನುಮತಿ ಕೋರಿ ಪೋಷಕರಿಂದ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಸುಪ್ರೀಂ ಕೋರ್ಟ್ ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸುವಂತೆ ಸೂಚಿಸಿದ್ದಂತ ಸೂಚನೆಯಂತೆ ವಿಚಾರಣೆಯನ್ನು ಪೂರ್ಣಗೊಳಿಸಿತ್ತು. ಆ ನಂತ್ರ ತನ್ನ ತೀರ್ಪನ್ನು ಕಾಯ್ದಿರಿಸಿತ್ತು.
ಇಂದು ಬೆಳಿಗ್ಗೆ 10.30ಕ್ಕೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠದ ನ್ಯಾಯಮೂರ್ತಿ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ.ರಾಜೇಶ್ ರೈ ಅವರನ್ನೊಳ್ಳಗೊಂಡ ನ್ಯಾಯಪೀಠವು ಕಾಯ್ದಿರಿಸಿದ್ದಂತ ತೀರ್ಪನ್ನು ಪ್ರಕಟಿಸಿದೆ.

ಹೈಕೋರ್ಟ್ ವಿಭಾಗೀಯ ನ್ಯಾಯಪೀಠವು 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಮುಂದುವರೆಸುವಂತೆ ಶಿಕ್ಷಣ ಇಲಾಖೆಗೆ ಆದೇಶಿಸಿದೆ.

Latest Indian news

Popular Stories