ಮಂಗಳೂರು: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದ ನೇತ್ರಾವತಿ ನದಿ ತುಂಬಿ ಹರಿಯುತ್ತಿದ್ದು, ಅಪಾಯ ಮಟ್ಟದ ಸನಿಹದಲ್ಲಿ ಹರಿಯುತ್ತಿದೆ.
ನೇತ್ರಾವತಿ ನದಿಯ ಅಪಾಯದ ಮಟ್ಟ 8.5 ಮೀಟರ್ ಆಗಿದ್ದು, ಸದ್ಯ 8.3 ಮೀಟರ್ ಎತ್ತರದಲ್ಲಿ ನದಿ ಹರಿಯುತ್ತಿದೆ.
ಪಾಣೆಮಂಗಳೂರು, ಬಂಟ್ವಾಳ ಪೇಟೆ, ಆಲಡ್ಕ ಸಹಿತ ಕೆಲ ತಗ್ಗು ಪ್ರದೇಶಗಳಿಗೆ ಈಗಾಗಲೇ ನೀರು ನುಗ್ಗಿದ್ದು, ಮಳೆ ಮುಂದುವರಿದರೆ ಜಲಾವೃತವಾಗುವ ಭೀತಿ ಎದುರಿಸುತ್ತಿದ್ದಾರೆ.
ಆಲಡ್ಕದಲ್ಲಿ ಕೆಲ ಮನೆಗಳು ಕೆಲ ಮನೆಗಳು ಜಲಾವೃತವಾಗಿದ್ದು, ನೆರೆ ಭೀತಿಯ ಊರಿನ ಜನರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳಾಂತರ ಗೊಳ್ಳುವಂತೆ ಸೂಚಿಸಲಾಗಿದೆ.