ಭದ್ರಾ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಶಿವಮೊಗ್ಗ ಮೂಲದ ಮೂವರು ನೀರುಪಾಲು

ಚಿಕ್ಕಮಗಳೂರು: ತೆಪ್ಪ ಮುಳುಗಿ ಮೂವರು ಪ್ರವಾಸಿಗರು ನೀರುಪಾಲಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬೈರಾಪುರ ಗ್ರಾಮದಲ್ಲಿ ಬುಧವಾರ ನಡೆದಿದೆ.

ನೀರುಪಾಲಾದವರನ್ನು ಆದೀಲ್, ಸಾಜೀದ್ ಹಾಗೂ ಅಫ್ದಾಖಾನ್ ಎಂದು ಗುರುತಿಸಲಾಗಿದ್ದು ಇವರು ಶಿವಮೊಗ್ಗ ಜಿಲ್ಲೆಯ ವಿದ್ಯಾನಗರ ವಾಸಿಗಳೆಂದು ಹೇಳಲಾಗಿದೆ.

ಬೈರಾಪುರ ಗ್ರಾಮದಲ್ಲಿರುವ ಭದ್ರಾ ನದಿಯ ಹಿನ್ನೀರಿನಲ್ಲಿ ತೆಪ್ಪದಲ್ಲಿ ಹೋಗುತ್ತಿದ್ದ ವೇಳೆ ತೆಪ್ಪ ಮುಳುಗಿ ಮೂವರು ನೀರುಪಾಲಾಗಿದ್ದಾರೆ. ಘಟನಾ ಸ್ಥಳಕ್ಕೆ ವನ್ಯಜೀವಿ, ಪೊಲೀಸ್ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ ಶೋಧ ಕಾರ್ಯ ನಡೆಸುತ್ತಿದ್ದಾರೆ.ಎನ್.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Latest Indian news

Popular Stories