ಇಂದಿನಿಂದ ಮೂರು ರಾಜ್ಯಗಳಿಗೆ ಮೋದಿ ಪ್ರವಾಸ

ಪ್ರಾಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಮೂರು ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ.ಎರಡು ದಿನಗಳ ಈ ಪ್ರವಾಸ ಕೇರಳದಿಂದ ಆರಂಭವಾಗಲಿದ್ದು, ಮಹಾರಾಷ್ಟ್ರದಲ್ಲಿ ಮುಕ್ತಾಯಗೊಳ್ಳಲಿದೆ. ಈ ಭೇಟಿಯಲ್ಲಿ ಪ್ರಧಾನಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದು, ಹಲವಾರು ಉಪಕ್ರಮಗಳನ್ನು ಪರಿಶೀಲಿಸಲಿದ್ದಾರೆ.

ಮಹಾರಾಷ್ಟ್ರದಲ್ಲಿ ದೀನದಯಾಳ್ ಉಪಾಧ್ಯಾಯ ಪ್ರತಿಮೆಯ ಅನಾವರಣ ಕಾರ್ಯವನ್ನೂ ಮೋದಿ ಮಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ (ಮಂಗಳವಾರ) ಕೇರಳ ತಮಿಳುನಾಡು ಮತ್ತು ಮಹಾರಾಷ್ಟ್ರಕ್ಕೆ ಎರಡು ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ.ಈ ಭೇಟಿಯಲ್ಲಿ ಅವರು ಪ್ರಮುಖ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.ಅವರು ಕೇರಳದಿಂದ ತಮ್ಮ ಪ್ರವಾಸವನ್ನು ಆರಂಭಿಸಿ ಬುಧವಾರ ಮಹಾರಾಷ್ಟ್ರದಲ್ಲಿ ಮುಕ್ತಾಯಗೊಳಿಸಲಿದ್ದಾರೆ. ವಿವಿಧ ಯೋಜನೆಗೆಗಳಿಗೆ ಚಾಲನೆ ನೀಡುವುದರ ಜತೆಗೆ ಹಲವಾರು ಉಪಕ್ರಮಗಳನ್ನು ಮೋದಿ ಪರಿಶೀಲಿಸಲಿದ್ದಾರೆ. ಇಂದು ಬೆಳಗ್ಗೆ ಮೋದಿ ಕೇರಳದ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರಕ್ಕೆ ಭೇಟಿ ನೀಡುವ ಮೂಲಕ ವಿವಿಧ ರಾಜ್ಯಗಳಿಗೆ ಪ್ರವಾಸ ಆರಂಭಿಸಲಿದ್ದಾರೆ

Latest Indian news

Popular Stories