ಉಡುಪಿ: ಕೇಂದ್ರ ಮೋಟಾರು ವಾಹನ‌ ಕಾಯ್ದೆ ಉಲ್ಲಂಘಿಸಿ ಎಲ್ಇಡಿ ಲೈಟ್ ಬಳಸಿದರೆ ಕಾನೂನು ಕ್ರಮ – ಪೊಲೀಸ್ ಇಲಾಖೆ

ಉಡುಪಿ: ಇತ್ತೀಚಿನ ದಿನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್‌ಇಡಿ (LED) ದೀಪಗಳನ್ನು ವಾಹನಗಳಿಗೆ ಬಳಸುತ್ತಿದ್ದು ಇದರಿಂದ ಎದುರು ಮುಖದಲ್ಲಿ ಸಂಚರಿಸುವ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟಾಗುತ್ತಿದೆ.

ಕೇಂದ್ರ ಮೋಟಾರು ಕಾಯ್ದೆ(CMV)ಯಲ್ಲಿ ನಮೂದಿಸಿರುವ ಮಾನದಂಡದಂತೆ ವಾಹನ ಸವಾರರು ಹೆಡ್‌ಲೈಟ್ ಗಳನ್ನು ಅಳವಡಿಸಿಕೊಳ್ಳಬೇಕು .

ಕಾಯ್ದೆ ಉಲ್ಲಂಘಿಸಿದರೆ ಅಂತಹ ವಾಹನ ಸವಾರರ ವಿರುದ್ಧ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Latest Indian news

Popular Stories