ರಾಯಚೂರು ಬಳಿ ಭೀಕರ ಅಪಘಾತ : ಲಾರಿಗೆ ಟಾಟಾ ಏಸ್ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ದುರ್ಮರಣ

ರಾಯಚೂರು : ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಪಗಡದಿನ್ನಿ ಕ್ಯಾಂಪ್ ಬಳಿ ಭೀಕರ ಅಪಘಾತ ನಡೆದಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಲಾರಿಗೆ ಟಾಟಾ ಏಸ್ ಗೆ ದಿಕ್ಕಿಯಾದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು ಟಾಟಾ ಏಸ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಇಸ್ಮಾಯಿಲ್, ಚನ್ನಬಸವ, ರವಿ, ಅಂಬರೀಷ್ ಎಂದು ಗುರುತಿಸಲಾಗಿದೆ.ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Latest Indian news

Popular Stories